ಬೀದರ್: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಬೀದರ ಜಿಲ್ಲಾ ಪೊಲೀಸರು 10.50 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಟಗುಪ್ಪಾ ಪೊಲೀಸ್ ಠಾಣಾ ವ್ಯಾಪ್ತಿಯ ಚಿಟಗುಪ್ಪಾ ಪಟ್ಟಣದ ನಾನ್ ಹಜರತ್ ದರ್ಗಾದ ಹತ್ತಿರ ವಾಹನವೊಂದರಲ್ಲಿ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆಹಾರ ನಿರೀಕ್ಷಕರ ರಾಜು ಪಂಚಾಳ ಅವರ ಸಮಕ್ಷಮದಲ್ಲಿ 4,05,000 ಮೌಲ್ಯದ 180 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು 6,00,000 ರೂ. ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿತರ ವಿರುದ್ಧ ಕ್ರಮಕೈಗೊಂಡಿದ್ದಾರೆ.
ಬೀದರ ಜಿಲ್ಲಾ ಪೊಲೀಸ್ ಡಿ.ಐ.ಜಿ.ಪಿ, ಈ.ವರವರ ಮಾರ್ಗದರ್ಶನದಂತೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನಿರ್ದೇಶನದಂತೆ ಚಿಟಗುಪ್ಪಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC