ತುಮಕೂರು: ನಗರದ ಮಳೆಕೋಟೆಯ ಉದ್ಯಮಿ ಇದಾಯತ್ ಉಲ್ಲಾ ಖಾನ್ ಫೋನ್ ಪೇ ಖಾತೆಯಿಂದ ಅವರ ಗಮನಕ್ಕೆ ಬಾರದಂತೆ 7.87 ಲಕ್ಷ ವರ್ಗಾವಣೆಯಾಗಿದ್ದು, ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಸ್ನೇಹಿತರಿಗೆ ಹಣ ವರ್ಗಾವಣೆ ಮಾಡುವಾಗ ಫೋನ್ ಪೇ ಬಳಕೆಯಾಗಲಿಲ್ಲ. ಪರಿಶೀಲಿಸಿದಾಗ ಸೆ. 18ರಿಂದ 23ರವರೆಗೆ 137 ಬಾರಿ ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಂಡಿರುವುದು ತಿಳಿಯಿತು. ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3.30ರ ಅವಧಿಯಲ್ಲಿ ಹಣ ವರ್ಗಾವಣೆಯಾಗಿದೆ. ಒಟ್ಟು 7,87,558 ಕಡಿತವಾಗಿದೆ’ ಎಂದು ಇದಾಯತ್ ಉಲ್ಲಾ ಖಾನ್ ದೂರು ನೀಡಿದ್ದಾರೆ.
ಫೋನ್ ಪೇ ಬಳಸಿ ವಿವಿಧ ಯುಪಿಐ ಐ.ಡಿಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC