ತುಮಕೂರು: ಮನೆಯಲ್ಲಿ ಇದ್ದುಕೊಂಡೇ ಪ್ಲಿಪ್ ಕಾರ್ಟ್‌ನ ಉತ್ಪನ್ನಗಳಿಗೆ ರಿವ್ಯೂ ನೀಡುತ್ತಾ, ಹೆಚ್ಚಿನ ಕಮಿಷನ್ ಪಡೆಯಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರ ಹೊರವಲಯ ಯಲ್ಲಾಪುರದ ಎನ್.ಕುಮಾರಸ್ವಾಮಿ 6 ಲಕ್ಷ ಕಳೆದುಕೊಂಡಿದ್ದಾರೆ.
ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಮಾಡಿದ ವಂಚಕರು ಹಣ ಗಳಿಕೆ ಬಗ್ಗೆ ತಿಳಿಸಿದ್ದಾರೆ. ಕುಮಾರಸ್ವಾಮಿ ಮೊದಲಿಗೆ 1 ಸಾವಿರ ಹೂಡಿಕೆ ಮಾಡಿದ್ದು, ಅದನ್ನು ಮತ್ತೆ ಅವರ ಖಾತೆಗೆ ವರ್ಗಾಯಿಸಿದ್ದಾರೆ. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದ್ದಲ್ಲಿ ಉತ್ತಮ ಲಾಭ ಗಳಿಸಬಹುದು ಎಂದು ಹೇಳಿದ್ದಾರೆ.
ಇದನ್ನು ನಂಬಿ ಒಟ್ಟು 6,04,800 ವರ್ಗಾಯಿಸಿದ್ದು, ಇದರಲ್ಲಿ 1,600 ಮಾತ್ರ ವಾಪಸ್ ಬಂದಿದೆ. ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC