ಔರಾದ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಿ. ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಘಟನೆ ತೀವ್ರ ಖಂಡನೀಯವಾಗಿದೆ ಎಂದು ಸುಭಾಷ್ ಚಂದ್ರ ಭೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಕಿಡಿಕಾರಿದ್ದಾರೆ.
ಸೋಮವಾರ ಪಟ್ಟಣದಲ್ಲಿ ತಹಶೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಈ ಘಟನೆ ಸಂಬಂಧ ಪತ್ರ ಬರೆದಿದ್ದು,ರಾಷ್ಟ್ರದ ಅತ್ಯುನ್ನತ ಸ್ಥಾನದಲ್ಲಿರುವ ಮುಖ್ಯ ನ್ಯಾಯಮೂರ್ತಿಗಳಿಗೆ ಅವಮಾನ ಮಾಡುವುದು ದೇಶಕ್ಕೆ ಅವಮಾನಿಸಿದಂತೆ, ಈ ಘಟನೆಗೆ ಕಾರಣನಾದ ವಕೀಲನ ಮೇಲೆ ದೇಶದ್ರೋಹ ಕೇಸ್ ದಾಖಲಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಘಟನೆ ಹಿಂದಿರುವ ಶಕ್ತಿಯನ್ನು ಪತ್ತೆ ಹಚ್ಚಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಸುನೀಲ್ ಮಿತ್ರಾ, ಆನಂದ ಕಾಂಬಳೆ, ಚಂದು ಡಿಕೆ, ಬಬ್ಲೂಶಾ ಮುಂತಾದವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC