ಕುಣಿಗಲ್: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 ತಿಂಗಳ ಗರ್ಭಿಣಿ ಎಂಬುವುದು ಗೊತ್ತಾಯಿತು. ಆಕೆಯನ್ನು ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC