nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕ್ಕೆ ಉತ್ತಮ ಸಂದೇಶ  ನೀಡಿದ ಮಹಾನ್ ವ್ಯಕ್ತಿ ಶ್ರೀ ಸಂತ ಸೇವಲಾಲ್ | ತಹಶೀಲ್ದಾರ್ ನಹೀದಾ ಜಮ್ ಜಮ್
    ಕೊರಟಗೆರೆ February 17, 2022

    ಸಮಾಜಕ್ಕೆ ಉತ್ತಮ ಸಂದೇಶ  ನೀಡಿದ ಮಹಾನ್ ವ್ಯಕ್ತಿ ಶ್ರೀ ಸಂತ ಸೇವಲಾಲ್ | ತಹಶೀಲ್ದಾರ್ ನಹೀದಾ ಜಮ್ ಜಮ್

    By adminFebruary 17, 2022No Comments2 Mins Read
    sevalal

    ಕೊರಟಗೆರೆ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಶ್ರೀ ಸಂತ ಸೇವಲಾಲ್ ಜಯಂತಿಯನ್ನು ಸರ್ಕಾರದ ಆದೇಶದ ಮೇರೆಗೆ  ಸರಳವಾಗಿ ಆಚರಣೆ ಮಾಡಲಾಗಿತ್ತು.

    ಸೇವಲಾಲ್ ಜಯಂತಿಯ ಆಚರಣೆಯ ವೇಳೆ ತಹಶೀಲ್ದಾರ್ ನಹೀದಾ ಜಮ್ ಜಮ್ ಅವರು ಮಾತನಾಡಿ, ಸೇವಲಾಲ್ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದಂತಹ ಮಹಾನ್ ವ್ಯಕ್ತಿ, ಇಂದು ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಆದೇಶಿಸಿರುವಂತೆ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ, ಅವರ ತತ್ವಗಳನ್ನು ಆದರ್ಶಗಳನ್ನು ಜೀವನದಲ್ಲಿ ಅಳಡಿಸಿಕೊಂಡು ಜೀವನವನ್ನು ಸಾಗಿಸೋಣ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ತಾಂಡಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜನೆ ಮಾಡಿ ಅದರಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ ಕೂಡಲೇ ಅವರಿಗೆ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದರು.


    Provided by
    Provided by

    ಬಂಜಾರ ಸಮುದಾಯದ ತಾಲ್ಲೂಕು ಅಧ್ಯಕ್ಷ ಬಿಜಿ ಶ್ರೀ ರಾಮುನಾಯ್ಕ ಮಾತನಾಡಿ, ಸೇವಲಾಲ್ ರವರು ನಮ್ಮ ಸಮಾಜಕ್ಕೆ ಜೀವನವನ್ನು ಮುಡಿಪಾಗಿಟ್ಟವರು, ಹಿಂದೆ ನಮ್ಮ ಸಮಾಜ ಪ್ರಾಣಿಗಳ ರೀತಿಯಲ್ಲಿ ಕಾಡುಗಳಲ್ಲಿ  ಗೆಡ್ಡೆ, ಗೆಣಸು ತಿನ್ನುತ್ತ ಬೆಳಯುತ್ತಿದ್ದೆವು. ಅದನ್ನು ಕಂಡ ಸೇವಲಾಲ್ ರವರು ನಮ್ಮ ಸಮಾಜಕ್ಕೆ ಹಲವು ಸೌಲಭ್ಯಗಳನ್ನು ಒದಗಿಸಿ ಮಾನವರಂತೆ ಬದುಕಲು ಅವಕಾಶ ಮಾಡಿಕೊಟ್ಟರು. ಅವರು ತಿಳಿಸಿದ ತತ್ವಗಳ ಮೇಲೆ ನಮ್ಮ ಸಮಾಜ ಬದುಕುತ್ತಿದೆ, ಸರ್ಕಾರ ಆದೇಶದಂತೆ ಕೋವಿಡ್ ಸೋಂಕನ್ನು ತಡೆಗಟ್ಟುವುದಕ್ಕೋಸ್ಕರ ಸರಳವಾಗಿ ಆಚರಣೆ ಮಾಡುವಂತೆ ಆದೇಶಿಸಿದೆ ಆದ್ದರಿಂದ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಮ್ಮ ತಾಂಡಗಳಲ್ಲಿ ಮಾಡಿ ಅಲ್ಲಿನ ಸಮಸ್ಯೆಯನ್ನು ಆಲಿಸಿ ಅವರಿಗೆ ಸೌಲಭ್ಯಗಳನ್ನು ದೊರಕಿಸಿಕೊಡಿ ಎಂದು ತಹಶೀಲ್ದಾರ್ ಬಳಿ ಮನವಿ ಮಾಡಿಕೊಂಡರು.

    ತಾಲೂಕು ಸಂಘಟನಾ ಕಾರ್ಯದರ್ಶಿ ವಿಜಯಶಂಕರ್ ಮಾತನಾಡಿ, ಸೇವಲಾಲ್ ಎಂಬ ನಾಮಾದೊಂದಿಗೆ ಬಡ ಬಂಜಾರರ ಅಜ್ಞಾನ ದೂರ ಮಾಡಲು ಫೆಬ್ರವರಿ 15 .1739 ರಲ್ಲಿ ಶ್ರೀ ಭೀಮ ನಾಯ್ಕ ಶ್ರೀಮತಿ ಧರ್ಮಿಣಿ ಮಾತೆ ಎಂಬ ದಂಪತಿಯ ಉದರದಲ್ಲಿ ಕರ್ನಾಟಕದ ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೋಪ್ಪ(ಭಾಯಗಡ್, ಸೂರ ಖಂಡ್) ಎಂಬಲ್ಲಿ ಈ ದೈವ ಪುರುಷನ ಜನನವಾಯಿತು. ಹರಪ್ಪ ನಾಗರಿಕತೆಯಿಂದ ಬೆಳೆದು ಬಂದ ಬಂಜಾರರು. ಸಾವಿರಾರು ವರ್ಷಗಳಿಂದ ಗ್ರಾಮ, ನಗರ ಜೀವನಗಳಿಂದ ದೂರವಿದ್ದು, ಅಜ್ಞಾನ, ಅಂಧಕಾರಗಳಿಂದ ಅರಣ್ಯವಾಸಿಗಳಾಗಿ ಜೀವನ ನಡೆಸುತ್ತಿದ್ದರು. ಇವರಿಗೆ ಶ್ರೀ ಸೇವಾ ಲಾಲ್ ಮಹಾರಾಜರ ಜನನದಿಂದ ಮುಕ್ತಿಯ ಮೆಟ್ಟಿಲು ದೊರೆಯಿತು ಎಂದರು.

    ಬಂಜಾರರು ಈ ದೈವ ಪುರುಷನನ್ನು “ಮೋತಿವಾಳೋ” “ಲಾಲ್ ಮೋತಿ” ಎಂದು ಕರೆಯುತ್ತಾರೆ. ಕಾರಣ ಮುಂಬಯಿಯ “ಸ್ಮಿತ್ ಭಾವುಚಾ” ಎಂಬ ಸ್ಥಳದಲ್ಲಿ ಹಿಂದೆ ಪೋರ್ಚುಗೀಸರ ಹಡಗು ಸಿಕ್ಕಿ ಹಾಕಿ ಕೊಂಡಿತ್ತು. ಇದನ್ನು ಸೇವಾಲಾಲ್ ತಮ್ಮ ಜಾಣತನದಿಂದ ದಡ ಸೇರಿಸಿದ ವೀರರಾಗಿದ್ದರು. ಅದರ ಪ್ರತಿಯಾಗಿ ಪೋರ್ಚುಗೀಸರು ಇವನಿಗೆ ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಅದಕ್ಕಾಗಿ ಈತನನ್ನು ಮೋತಿವಾಳೋ ಎಂದು ಕರೆಯುತ್ತಾರೆ. ಬುದ್ಧ, ಬಸವ, ಕಬೀರ, ಗುರು ನಾನಕ್ ಮುಂತಾದ ಧಾರ್ಮಿಕ ಮಾನವತವಾದಿಗಳ ಮಧ್ಯೆ ಒಬ್ಬ ಸಾಮಾನ್ಯ ದನಗಳನ್ನು ಮೇಯಿಸುತ್ತ ದನಗಾಹಿ ಗೋಪಾಲನಾಗಿದ್ದ ಸೇವಾಲಾಲ್ ತಮ್ಮ ಜೀವನನುಭವದ ಮೂಲಕ ಗೌರವಯುತ ಮಾತುಗಳಲ್ಲಿ ಸತ್ಯ, ಅಹಿಂಸಾ ಮಾರ್ಗಗಳನ್ನು ಪ್ರಕಾಶಗೊಳಿಸುವ ನಿಟ್ಟಿನಲ್ಲಿ ತಮ್ಮ ಬೋಧನೆಯನ್ನು ನಡೆಸಿದರು. ಒಂದು ಸಹೋದರತ್ವದ, ಭ್ರಾತೃತ್ವದ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ಹಾಗಾಗಿ ನಮ್ಮ ಬಂಜಾರ ತಾಂಡಗಳಲ್ಲಿ ಇಂದು ಹಬ್ಬದ ವಾತಾವರಣ ಇದೆ. ಇದಕ್ಕೆ ಮುಖ್ಯ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ  ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲು ಕಾರ್ಯಗತಕ್ಕೆ ತಂದ ಸಿದ್ದರಾಮಯ್ಯನವರಿಗೆ ನಮ್ಮ ಜನಾಂಗ ಆಭಾರಿಯಾಗಿದೆ ಎಂದರು.

    ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮೀಸೆ ಲಕ್ಷ್ಮ ನಾಯ್ಕ , ಸಂಘದ ಪದಾಧಿಕಾರಿಗಳಾದ ಶಂಕರ್ ಬಿ., ಕಾಳಿಚರಣ್ , ನಾಗ ನಾಯ್ಕ ಸಿದ್ದೇಶ್, ಮೈಸೂರು ಮೂರ್ತಿ, ಕೃಷ್ಣನಾಯ್ಕ, ಮುರುಳಿನಾಯ್ಕ, ಪುಟ್ಟರಾಜು, ಸಚಿನ್, ಚಿಂಟು, ಮಾಗೇಶ್ ನಾಯ್ಕ, ಶಂಕರ್ ನಾಯ್ಕ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಭಾಗಿಯಾಗಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.