ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿನ ಮುಖ್ಯ ರಸ್ತೆಯಾದ ನೀಲಮಠದಿಂದ ಅಂಬೇಡ್ಕರ್ ವೃತ್ತವರೆಗಿನ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆ ದುರಸ್ತಿ ಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಾರ್ವಜನಿಕರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೀರೆಲ್ಲ ರಸ್ತೆ ಮೇಲೆಯೇಹರಿಯುತ್ತಿವೆ. ರಸ್ತೆ ಅಕ್ಕ ಪಕ್ಕದಲ್ಲಿಯೇ ಮನೆಗಳಿದ್ದು, ಸೊಳ್ಳೆಗಳು ಕಾಟ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮಸ್ಥರು ರೋಗಗಳು ಬರುವ ಆತಂಕದಲ್ಲಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ರಸ್ತೆ ಮೇಲೆ ಮಕ್ಕಳು ಮತ್ತು ವೃದ್ಧರಿಗೆ ನಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನ ಸವಾರರು ಕೂಡ ಹೆದರಿಕೊಂಡೆ ವಾಹನ ಚಲಾವಣೆ ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆ ದುರಸ್ತಿ ಮಾಡಲು ಪಿಡಿಒ ಅವರಿವೆ ಮನವಿ ಮಾಡಿದ್ದರೂ ಕೂಡ ಅವರು ಸಂಪೂರ್ಣವಾಗಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ರಸ್ತೆಯ ಮತ್ತು ಚರಂಡಿಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರ ಆರೋಗ್ಯ ಕಾಪಾಡಿ, ಸುಗಮವಾಗಿ ಓಡಾಟಕ್ಕೂ ಅನುಕೂಲ ಮಾಡಿ ಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC