nammatumakuru

    Subscribe to Updates

    Get the latest creative news from FooBar about art, design and business.

    What's Hot

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026
    Facebook Twitter Instagram
    ಟ್ರೆಂಡಿಂಗ್
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ: ಸಚಿವ ಸಂತೋಷ್ ಲಾಡ್
    ತುಮಕೂರು October 9, 2025

    15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ: ಸಚಿವ ಸಂತೋಷ್ ಲಾಡ್

    By adminOctober 9, 2025No Comments2 Mins Read
    santhosh lad

    ತುಮಕೂರು: ರಾಜ್ಯದಲ್ಲಿ 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

    ನಗರದ ಹೊರವಲಯದ ಎಚ್‌.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ, ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 25 ಲಕ್ಷ. ಜಿಲ್ಲೆಯಲ್ಲಿ 1.17 ಲಕ್ಷ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಜೂಮ್ಯಾಟೊ, ಸ್ಟಿಗ್ಗಿ, ಫ್ಲಿಪ್‌ ಕಾರ್ಟ್‌ ಸಂಸ್ಥೆಗಳ ಡೆಲಿವರಿ ಕಾರ್ಮಿಕರಿಗೆ 2 ಲಕ್ಷ ಅಪಘಾತ ಪರಿಹಾರ ಹಾಗೂ ಜೀವವಿಮೆ ಸೇರಿದಂತೆ 4 ಲಕ್ಷ ವಿಮೆ ಸೌಲಭ್ಯ ಒದಗಿಸುವ ಸಲುವಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 30,256, ಜಿಲ್ಲೆಯ 809 ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

    ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್‌ ಗಳಿಗಾಗಿ ಜಾರಿಗೆ ತಂದಿರುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 98 ಪ್ರಕರಣಗಳಲ್ಲಿ 74.22 ಕೋಟಿ ಪರಿಹಾರ ವಿತರಿಸಲಾಗಿದೆ. ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಕಾರ್ಮಿಕರು ಸೇರಿದಂತೆ ರಾಜ್ಯದಲ್ಲಿ 40 ಲಕ್ಷ ಕಾರ್ಮಿಕರು ದುಡಿಯುತ್ತಿದ್ದಾರೆ. ಅಂತಹವರಿಗೆ ಸಾಮಾಜಿಕ ಭದ್ರತೆ, ಕಲ್ಯಾಣ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೋಂದಣಿ ಪೋರ್ಟಲ್ ಆರಂಭಿಸಲಾಗಿದೆ ಎಂದು ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಕಾರ್ಮಿಕ ಸಂಘಟನೆಗಳು ಒಟ್ಟಾಗಿದ್ದರೆ ಮಾತ್ರ ಸವಾಲುಗಳನ್ನು ಎದುರಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಕಾರ್ಮಿಕ ಸಂಘಟನೆಗಳು ರಾಜಕೀಯ ಪ್ರವೇಶ ಮಾಡಬಾರದು ಎಂದು ಸಲಹೆ ಮಾಡಿದರು.

    ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್‌, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ ಗೌಡ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜು, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್‌ ರಾಜ್‌ ಮೌರ್ಯ, ಕಾರ್ಮಿಕ ಆಯಕ್ಕ ಎಚ್.ಎನ್.ಗೋಪಾಲಕೃಷ್ಣ, ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ, ಸಹಾಯಕ ಆಯುಕ್ತರಾದ ಕೆ.ಎಲ್.ರವಿಕುಮಾರ್, ಬಿ.ಇ.ಶಿವಕುಮಾರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಎಸ್ಪಿ ಕೆ.ವಿ.ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಅಪರೂಪದ ವಿಸ್ಮಯ ಘಟನೆಯೊಂದು ನಡೆದಿದೆ. ಬರೋಬ್ಬರಿ…

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.