ರಾಮನಗರ: ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ಕೊನೆಗೂ ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮದ ಉಲ್ಲಂಘನೆ ಮೇರೆಗೆ ಮುಚ್ಚಲ್ಪಟ್ಟಿದ್ದ ಬಿಗ್ ಬಾಸ್ ಮನೆ ಕೊನಗೂ ತೆರೆಯಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಮನೆಯನ್ನು ತೆರೆಯಲಾಗಿದೆ.
ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್.ಪಿ.ಶ್ರೀನಿವಾಸ್ ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋದ ಗೇಟ್ ಸೀಲ್ ಓಪನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC