ಬೆಂಗಳೂರು: ‘ಬಿಗ್ ಬಾಸ್ ಕನ್ನಡ’ ಚಿತ್ರೀಕರಣ ನಡೆಯುತ್ತಿರುವ “ಜಾಲಿವುಡ್ ಆವರಣದ ಮೇಲಿನ ಬೀಗ ಮುದ್ರೆಯನ್ನು ತೆರವುಗೊಳಿಸಲು ನೆರವಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಟ ಮತ್ತು ನಿರೂಪಕ ಕಿಚ್ಚ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಿಚ್ಚ ಸುದೀಪ್, ಸಮಯಕ್ಕೆ ಸರಿಯಾಗಿ ಬೆಂಬಲ ಸೂಚಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಅವ್ಯವಸ್ಥೆ ಅಥವಾ ಅಡಚಣೆಗಳಲ್ಲಿ ಬಿಗ್ ಬಾಸ್ ಕನ್ನಡ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಡಿಸಿಎಂ ಅವರಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ನಲ್ಪಾಡ್ ಅವರ ಸಮರ್ಪಿತ ಪ್ರಯತ್ನಗಳಿಗಾಗಿಯೂ ಬಹಳ ಧನ್ಯವಾದಗಳು. ಬಿಬಿಕೆ12 ಈಸ್ ಹಿಯರ್ ಟು ಸ್ಟೇ” ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC