ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್ ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ.
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು.
ಈ ಪೈಕಿ ಒಂದು ಕುಟುಂಬಕ್ಕೆ ಸೇರಿದ 10 ವರ್ಷದ ಬಾಲಕಿಯೊಬ್ಬಳು ರಾತ್ರಿ ವೇಳೆ ಕಾಣೆಯಾಗಿದ್ದಳು. ಡೇರೆಯೊಳಗೆ ಮಲಗಿದ್ದ ವೇಳೆ ರಾತ್ರಿ ಮಳೆ ಬಂದಿದ್ದು, ಹೀಗಾಗಿ ಬಾಲಕಿಯ ಪೋಷಕರು ಎದ್ದು ನೋಡಿದಾಗಿ ಬಾಲಕಿ ನಾಪತ್ತೆಯಾಗಿರುವುದು ಗೊತ್ತಾಗಿದೆ. ಕೂಡಲೇ ಕುಟುಂಬಸ್ಥರು ಮಳೆಯಲ್ಲೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಸ್ವಲ್ಪ ಸಮಯದ ನಂತರ ಬಾಲಕಿ ಡೇರೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಣ್ಣಿನಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು, ಅಪ್ರಾಪ್ತೆ ಮೈ ಮೇಲೆ ಬಟ್ಟೆ ಇರದ ಕಾರಣ ಬಾಲಕಿ ಕುಟುಂಬ ಮತ್ತು ತನಿಖಾ ತಂಡದ ಸದಸ್ಯರು ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದರು. ಡಿಸಿಪಿ ಬಿಂದು ಮಣಿ, ಸುಂದರ್ ರಾಜ್ ಮತ್ತು ವಿಶೇಷ ಪೊಲೀಸ್ ತಂಡದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿದರು.
ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನ ಕೊಳ್ಳೇಗಾಲದಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕೃತ್ಯ ಎಸಗಿದ್ದ ವಿಕೃತ ಕಾಮುಕ ಮೈಸೂರಿನ ಖಾಸಗಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಹೋಗಿದ್ದ. ಇತ್ತ ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದ ಪೊಲೀಸರು ಕೊಳ್ಳೇಗಾಲದಲ್ಲಿ ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.
ಮದ್ಯದ ಚಟಕ್ಕೆ ಒಳಗಾಗಿರುವ ಕಾರ್ತಿಕ್ 4 ತಿಂಗಳ ಹಿಂದಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿ, 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


