nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ
    ತಿಪಟೂರು October 12, 2025

    ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ

    By adminOctober 12, 2025No Comments2 Mins Read
    pm dhana yojana

    ತಿಪಟೂರು: ನಗರದ ಗುರುಕುಲಾನಂದಶ್ರಮದಲ್ಲಿ ಕೋನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಯೋಜನೆಗೆ ಶನಿವಾರ ಚಾಲನೆ ನೀಡಲಾಯಿತು.

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಮಾತನಾಡಿ, ದೇಶದಲ್ಲಿ ಧಾನ್ಯ ಹಾಗೂ ಬೇಳೆಕಾಳು ಉತ್ಪಾದನೆ ಇನ್ನೂ ಬೇಡಿಕೆಗೆ ತಕ್ಕಷ್ಟು ಇಲ್ಲ. 1960ರ ದಶಕದಿಂದಲೇ ಆಹಾರ ಕೊರತೆ ನಿವಾರಣೆಗೆ ಹಸಿರು ಕ್ರಾಂತಿ ನಡೆದಿದೆ. ಆದರೆ ಇಂದಿನ ಸ್ಥಿತಿಯಲ್ಲಿ ದ್ವಿದಳ ಧಾನ್ಯ ಬೆಳೆಗಳ ಸ್ವಾವಲಂಬನೆಗೆ ಹೊಸ ಕ್ರಾಂತಿಯ ಅವಶ್ಯಕತೆ ಎದುರಾಗಿದೆ ಎಂದರು.


    Provided by
    Provided by

    ಈ ಯೋಜನೆಯಿಂದ ರೈತರ ಕೈಗೆ ತಂತ್ರಜ್ಞಾನ, ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕ ಒದಗಿಸುತ್ತದೆ. ವಿಜ್ಞಾನಾಧಾರಿತ ಕೃಷಿ ಮತ್ತು ಸಂಗ್ರಹಣೆ ವ್ಯವಸ್ಥೆ ಮೂಲಕ ರೈತನ ಆದಾಯವನ್ನು ದ್ವಿಗುಣಗೊಳಿಸುತ್ತದೆ ಎಂದರು.

    ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ರೈತ ಬೆಳೆದ ಬೆಳೆಗಳಿಗೆ ಸರ್ಕಾರವು ಸಹಾಯಕವಾಗಬೇಕು. ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಮಾಡಬೇಕಿದೆ. ಭಾರತ ಸರ್ಕಾರವು ಸಿರಿಧಾನ್ಯಗಳ ವರ್ಷವೆಂದು ಘೋಷಣೆ ಮಾಡಿದ್ದು, ಕೃಷಿವಲಯ ಅಭಿವೃದ್ಧಿಯಾಗಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದರು.

    ಶಾಸಕ ಕೆ.ಷಡಕ್ಷರಿ ಮಾತನಾಡಿ, ‘ರಾಜ್ಯ ಸರ್ಕಾರವು ರೈತರನ್ನು ಸೋಮಾರಿ ಮಾಡಿದೆ ಎಂದು ಹೇಳಿರುವ ಸಚಿವ ಸೋಮಣ್ಣ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ಹಿಂದುಳಿದವರನ್ನು ಮೇಲೆತ್ತಲು ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಅದರಂತೆ ವಿವಿಧ ರಾಜ್ಯಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ ಎಂದರು.

    ವಿವಿಧ ಇಲಾಖೆಗಳ ಸಹಯೋಗದಲ್ಲಿ ಕರಕುಶಲ ಹಾಗೂ ಯಂತ್ರೋಪಕರಣ, ಆಹಾರ ಉತ್ಪಾದನೆ ವಸ್ತು ಪ್ರದರ್ಶನ ನಡೆಯಿತು.

    ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಶಾಸಕ ಜ್ಯೋತಿಗಣೇಶ್‌, ನಗರಸಭೆ ಅಧ್ಯಕ್ಷೆ ಮೇಘಶ್ರೀಭೂಷಣ್‌, ಕೃಷಿಕ ಸಮಾಜದ ಅಧ್ಯಕ್ಷ ಎಮ್.ಎಸ್.ಯೋಗೀಶ್, ಉಪವಿಭಾಗಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ಮೋಹನ್‌ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಎಂ.ಸುದರ್ಶನ್, ಕೆವಿಕೆ ಮುಖ್ಯಸ್ಥ ಶಂಕರ್, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಸಹಾಯಕ ಕೃಷಿ ನಿರ್ದೇಶಕ ಪವನ್‌ಕುಮಾರ್‌, ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್, ಬಿಜೆಪಿ ಮುಖಂಡ ರವಿಹೆಬ್ಬಾಕ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ

    May 23, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.