ಬೀದರ್: ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಮಾಡಿರುವುದು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿಯ ತಮ್ಮ ನಿವಾಸದಲ್ಲಿ ಭಾನುವಾರ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಔರಾದ್ ಜನರ ಬಹುದಿನಗಳ ಕೊಡುಗೆ ಕಾಂಗ್ರೆಸ್ ಸರಕಾರ ನೆರವೇರಿಸಿದೆ. ಈ ಹಿಂದಿನ ಬಿಜೆಪಿ ಸರಕಾರ ಮಾಡದ ಕೆಲಸ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಪಟ್ಟಣದ ಜನರಿಗೆ ಆಶ್ವಾಸನೆ ನೀಡಿರುವೆ. ಅದರಂತೆ ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಿದ್ದೇನೆ, ನಾನು ಈ ಹಿಂದೆ ಸಚಿವನಾಗಿರುವಾಗ ನಿಯಮದ ಪ್ರಕಾರ ಎಲ್ಲ ಮಾನದಂಡಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈಗ ಎಲ್ಲವನ್ನು ಸಿದ್ಧಪಡಿಸಿಕೊಂಡು ಸಚಿವ ಸಂಪುಟದಲ್ಲಿ ಪುರಸಭೆ ಘೋಷಣೆಯ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಔರಾದ್ ಪಟ್ಟಣ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಮುಖಂಡ ಡಾ.ಭೀಮಸೇನರಾವ ಶಿಂಧೆ ಮಾತನಾಡಿ, ಲೋಕಸಭೆ ಚುನಾವಣೆಯ ವೇಳೆ ಪುರಸಭೆಯೊಂದಿಗೆ ಪಟ್ಟಣದ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದೀರಿ ಎಂದು ನೆನಪಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು ಐದು ಕೋಟಿ ಅನುದಾನ ನೀಡುವುದಾಗಿ ಘೋಷಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಯಾವುದಕ್ಕೂ ಹೆದರದೇ ಪಕ್ಷದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚನ್ನಪ್ಪ ಉಪ್ಪೆ, ಪಪಂ ಮಾಜಿ ಅಧ್ಯಕ್ಷ ಬಾಬುರಾವ ತಾರೆ, ಪಪಂ ಸದಸ್ಯರಾದ ಸುನಿಲಕುಮಾರ ದೇಶಮುಖ, ಪ್ರಶಾಂತ ಫುಲಾರಿ, ಶರಣಪ್ಪ ಪಾಟೀಲ್, ಶಾಲೊಮನ್ ಮಹೀಮಕರ್, ಸುನಿಲ ಮೀತ್ರಾ, ಅನಿಲ ನಿರ್ಮಳೆ, ಪಪ್ಪು ದೇವಕತ್ತೆ, ಪ್ರವೀಣ ಕರಂಜೆ, ಅನಿಲ ವಡಿಯಾರ್, ಮಹೋಹರ್, ಬಾಲಾಜಿ, ಕಮಳಮ್ಮ ಚಿಕ್ಲಿ, ವೆಂಕಟರಾವ ಪಾಟೀಲ್, ಸೂರ್ಯಕಾಂತ ಉಡಬಾಳೆ ಸೇರಿದಂತೆ ಅನೇಕರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC