ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿ ವ್ಯಾಪ್ತಿಯ ಸಿ.ಕೆ. ಪುರ ಗ್ರಾಮ ಪಂಚಾಯಿತಿ ಮುಂಭಾಗದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ದುರಸ್ತಿ ಕಾರ್ಯವು ನಡೆಯಿತು.
ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಮಪ್ಪನವರು ಅಧ್ಯಕ್ಷತೆ ಶಾಲೆಯ ಬಗ್ಗೆ ಕಾಳಜಿ ವಹಿಸಿ ದುರಸ್ತಿ ನಡೆಸಲಾಗಿದ್ದು, ಮಳೆಯಿಂದ ಸೋರುತ್ತಿದ್ದ ಕಟ್ಟಡವನ್ನು ದುರಸ್ತಿ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ.
ಈ ಶಾಲೆಯಲ್ಲಿ 93 ಜನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೇ ವೇಳೆ ಎಲ್ಲ ಮಕ್ಕಳಿಗೆ ಬೆಳೆ, ಎಣ್ಣೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ದೈಹಿಕ ಶಿಕ್ಷಕ ಲಕ್ಷ್ಮಿನಾರಾಯಣ, ಶೀನಿವಾಸ್, ಪೃಥ್ವಿರಾಜ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ದೇವರಹಟ್ಟಿ, ನಾಗರಾಜು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy