ಕೊರಟಗೆರೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಭಾಗ ವತಿಯಿಂದ ಬಿಎ ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರವೀಂದ್ರ ಶರ್ಮ ಟಿ.ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಯುರೋಪಿನ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಸೃಷ್ಠಿಸಿದ ಇಟಲಿಯ ಏಕೀಕರಣದ ವಿವಿಧ ಹಂತಗಳ ಹೋರಾಟವನ್ನು ಮತ್ತು ಅದರ ಪ್ರಾಮುಖ್ಯತೆಯನ್ನು ಅರ್ಥೈಸಿದ್ದು ಉಪನ್ಯಾಸದ ಪ್ರಯೋಜವನ್ನು ವಿದ್ಯಾರ್ಥಿಗಳು ಪಡೆದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯಕ ಕಾರ್ಯಕ್ರಮ ಉದ್ಘಾಟಿಸಿ ಇಟಲಿಯ ಏಕೀಕರಣ ಉಪನ್ಯಾಸದ ಬಗ್ಗೆ ವಿವರಿಸಿದರು. ವಿಭಾಗದ ಮುಖ್ಯಸ್ಥ ಡಾ.ರೇಣುಕಾ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ಡಾ.ಚೈತಾಲಿ, ಡಾ.ಅಮಿತಾ, ಡಾ.ಅಶ್ವಾಕ್ ಅಹಮದ್, ಗೋವಿಂದರಾಜು, ಡಾ.ರಮೇಶ್, ಶ್ರೀರಂಗನಾಥ ಮೂರ್ತಿ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC