ತುಮಕೂರು: ಭಾಗ್ಯಲಕ್ಷ್ಮಿ ಯೋಜನೆಯಡಿ 2026–07ನೇ ಸಾಲಿನಲ್ಲಿ ನೋಂದಣಿಯಾಗಿ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತವನ್ನು ಮಂಜೂರು ಮಾಡಲು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 30 ಕಡೆಯ ದಿನವಾಗಿದೆ.
ಪರಿಪಕ್ವ ಮೊತ್ತದ ಮಂಜೂರಾತಿಗಾಗಿ ಫಲಾನುಭವಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಅಕ್ಟೋಬರ್ 30ರೊಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಯೋಜನೆಯ ಸೌಲಭ್ಯವನ್ನು ಪಡೆಯಬೇಕೆಂದು ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರ ಅಥವಾ ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC