ತುಮಕೂರು: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000ರೂ. ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲು ಅರ್ಹರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು. ಪ್ರಶಸ್ತಿಗಾಗಿ ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅಕ್ಟೋಬರ್ 23ರೊಳಗಾಗಿ ಸಲ್ಲಿಸತಕ್ಕದ್ದು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC