ಸರಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಗೊಳಿಸಲು ಸಹಕಾರ ನೀಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ತಾಲೂಕಿನ ಕಳಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶನೇಶ್ವರ ದೇವಸ್ಥಾನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಸಾಕಷ್ಟು ರಸ್ತೆಗಳು ಹದಗೆಟ್ಟಿದ್ದು, ರಸ್ತೆ, ಶಾಲಾ ಕಾಲೇಜು ಅಭಿವೃದ್ಧಿಗೆ ಮಾಜಿ ದಿ ಶಾಸಕ ಚಿಕ್ಕಮಾದು, ಅಭಿವೃದ್ಧಿ ಹರಿಕಾರ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರು ತಾಲೂಕಿನ ಬಗ್ಗೆ ಹೆಚ್ಚು ಗಮನ ಕೊಟ್ಟು ಅಭಿವೃದ್ಧಿ ಪಡಿಸಲು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಕಳಸೂರು ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ರಸ್ತೆ, ಅಭಿವೃದ್ಧಿ ಮಾಡಲಾಗಿದೆ. ಮಾರಮ್ಮನ ದೇವಸ್ಥಾನಕ್ಕೆ ಹೆಚ್ಚಿನ ಅನುದಾನ ಕೇಳಿದ್ದೀರಿ. ದೇವಸ್ಥಾನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಮಾಡಲಾಗುವುದು ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗಳಿಗೂ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಿಕೊಂಡು ಬರುತ್ತಿದ್ದೇವೆ. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಗ್ಯಾರಂಟಿ ಮಾಡಿದ್ದಾರೆ. ತಾಲೂಕುವಾರು ಅನುದಾನ ನೀಡಿದರೆ ಅಭಿವೃದ್ಧಿ ಆಗಲಿದೆ. ಈಗ ಕ್ಷೇತ್ರಾವಾರು ಅನುದಾನ ನೀಡುತ್ತಿದ್ದಾರೆ. 2000 ಸಾವಿರ ಕೋಟಿ ರೂ.ಅನುದಾನ ನೀಡಿದರೆ ತಾಲೂಕು ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದರು.
ಕುರುಬ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪಕೋಟೆ, ಮಾತನಾಡಿ, 10 ಲಕ್ಷ ರೂ ನೀಡಿ, ಮಾರಮ್ಮನ ದೇವಸ್ಥಾನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದೀರಿ. ಅದೇ ರೀತಿ ಹೆಚ್ಚಿನ ಅನುದಾನ ನೀಡಿ ದೇವಸ್ಥಾನದ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ತೆಲುಗು ಶೆಟ್ಟರು ಭವನಕ್ಕೆ ಅನುದಾನವನ್ನು ನೀಡಿ ಕೆರೆಯಿಂದ ಹೊಳೆವರೆಗೆ ರಸ್ತೆ ಅಭಿವೃದ್ಧಿ ಸರಿಪಡಿಸಿ, ಬಸ್ ನಿಲ್ದಾಣ ಸರಿಪಡಿಸಿ ಎಂದು ಮನವಿ ಮಾಡಿಕೊಂಡರು.
ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ, ಕುರುಬ ಸಂಘದ ಜಿಲ್ಲಾದ್ಯಕ್ಷ ಶಿವಪ್ಪ ಕೋಟೆ, ಕೋಟೆ ತಾಲೂಕು ಅಧ್ಯಕ್ಷ ಎಂ.ಬಿ.ಆನಂದ ಮೊಳೆಯೂರು, ಕೆ.ಬೀರೇಗೌಡ, ವೇಣು, ಪಂಚಾಯಿತಿ ಅಧ್ಯಕ್ಷ ಶೈಲೇಂದ್ರಕುಮಾರ್, ಶೇಷಾದ್ರಿ,
ಶಿವಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜು, ಶಿವರಾಜು, ಕೆ.ಎಂ.ನಾಗರಾಜು, ಸೂರಿ, ಮಹದೇವಣ್ಣ, ಬೀರೇಗೌಡ, ಕಾಳಸ್ವಾಮಿ, ಸದಸ್ಯ ಮಂಜುನಾಥ, ಎಸ್ಸಿ ಎಸ್ಟಿ ಸಮಿತಿ ಸದಸ್ಯ ವೇಣುಗೋಪಾಲ್ ಪಂಚಾಯಿತಿ ಕಾರ್ಯದರ್ಶಿ ದೇವರಾಜು, ಕರಿಯಪ್ಪ, ಮಂಜು ಬೇಗೂರು, ವಿಜಯ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC