nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ
    ತಿಪಟೂರು October 20, 2025

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    By adminOctober 20, 2025No Comments2 Mins Read

    ತಿಪಟೂರು: ಸಮಾಜದಲ್ಲಿನ ಸಾಮರಸ್ಯ ಹಾಗೂ ಸೌಹಾರ್ದದ ಕೊರತೆಯಿಂದ ರಾಜ್ಯದಲ್ಲಿ ವೀರಶೈವ ಸಮಾಜ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಿನಿಂದ ನಡೆದರೆ ನಮ್ಮನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಬಾಳೆಹೊನ್ನೂರು ರಂಬಾಪುರಿ ಮಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

    ನಗರದ ಪಿ.ಜಿ.ಎಂ ಕಲ್ಯಾಣ ಮಂಟಪದಲ್ಲಿ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಧರ್ಮದ ಆದರ್ಶಗಳನ್ನು ತಿಳಿದು ಸಮಾಜ ಕಟ್ಟುವ ಕೆಲಸವಾಗಬೇಕು. ಸಮುದಾಯದ ಜನ ಒಗ್ಗೂಡಿ ಗಟ್ಟಿ ಹೆಜ್ಜೆ ಇಡಬೇಕು. ಸ್ವಾಭಿಮಾನ, ಸಂಘಟನೆಯ ವೈಫಲ್ಯದಿಂದಾಗಿ ಸಮಾಜ ಛಿದ್ರವಾಗುತ್ತಿದೆ. ಸಂಘಟನೆಗೆ ಅಸಾಧ್ಯವಾದದ್ದನ್ನು ಸಾಧ್ಯಮಾಡುವ ಶಕ್ತಿಯಿದೆ ಎಂದು ಹೇಳಿದರು.

    ಇಂದು ಬಸವಣ್ಣನ ಹೆಸರು ಹೇಳುವವರು ವೀರಶೈವ, ಲಿಂಗಾಯತ ಬೇರೆ ಎಂದು ಹೇಳಿ ದ್ವಂದ್ವ ಹುಟ್ಟು ಹಾಕಿ, ಕಲುಷಿತ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

    ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಲಕ್ಷ ಲಕ್ಷ ಖರ್ಚು ಮಾಡಿ ಶಿಕ್ಷಣ ನೀಡಿದರೂ ಇಂದು ವೃದ್ಧಾಶ್ರಮಕ್ಕೆ ತಂದೆ ತಾಯಿಗಳನ್ನು ಸೇರಿಸುತ್ತಿದ್ದಾರೆ. ಅಂತಹವರಿಗೆ ಧರ್ಮಾಚರಣೆ, ಸಂಸ್ಕಾರಗಳನ್ನು ಕಲಿಸಬೇಕಿದೆ. ವಿದ್ಯಾರ್ಥಿಗಳು ವಿತ್ಯ ಕನಸು ಕಾಣುತ್ತಾ ಸ್ಪಷ್ಟ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕಿದ ಎಂದರು.

    ಶಾಸಕ ಕೆ.ಷಡಕ್ಷರಿ ಮಾತನಾಡಿ, ವೀರಶೈವ ಲಿಂಗಾಯತ ಸಮಾಜದಲ್ಲಿ ಸ್ವಲ್ಪ ಗೊಂದಲವಿದ್ದು, ಸಮೀಕ್ಷೆ ಸಂದರ್ಭದಲ್ಲಿ ಸಮಾಜದ 52 ಜನ ಶಾಸಕರ ಸಭೆ ನಡೆಸಲಾಗಿತ್ತು, ಗೊಂದಲಗಳನ್ನು ಮಠ ಮಾನ್ಯರ ಹಿರಿಯರು ಬಗೆಹರಿಸಬೇಕಿತ್ತು. ಮೊದಲು ನಾವು ಹಿ೦ದೂಗಳಾಗಿದ್ದು ನಂತರ ಸಮಾಜ, ಒಳಪಂಗಡಗಳು ನಮೂದಿಸಬೇಕಿತ್ತು ಎಂದರು.

    ಕಾರ್ಯಕ್ರಮದಲ್ಲಿ ಡಿ.ಬಿ.ಎಸ್.ಗುರುಸಿದ್ದಪ್ಪ ಚಾರಿಟೀಸ್ ಟ್ರಸ್ಟ್‌ನಿಂದ ಎಸ್‌ ಎಸ್‌ ಎಲ್‌ ಸಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ನಡೆಯಿತು.

    ಬೆಸ್ಕಾಂ ಇಂಜಿನಿಯರ್ ಕೆ.ಎಸ್‌.ಎಂ.ಸ್ವಾಮಿ, ನಗರಸಭೆ ಪ್ರಭಾರ ಅಧ್ಯಕ್ಷ ಮೇಘಾಶ್ರೀ ಭೂಷಣ್, ನಿಕಟ ಪೂರ್ವ ಅಧ್ಯಕ್ಷ ಯಮುನಾ ಧರಣೀಶ್, ನಗರಸಭಾ ಸದಸ್ಯರಾದ ಸಂಗಮೇಶ್‌, ಶಶಿಕಿರಣ್‌, ಪದ್ಮ ತಿಮ್ಮೇಗೌಡ, ಅಶ್ವಿನಿ ದೇವರಾಜ, ಯೋಗೀಶ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿಖಿಲ್ ರಾಜಣ್ಣ, ಹಾಸನ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ನವಿಲೆ ಪರಮೇಶ್‌, ತುಮಕೂರು ಜಿಲ್ಲಾ ವೀರಶೈವ ಸಂಘದ ಅಧ್ಯಕ್ಷ ಪರಮೇಶ್, ಜಿಲ್ಲಾ ನೌಕರ ಸಂಘದ ಅಧ್ಯಕ್ಷ ರಮೇಶ್‌, ಬಿಮೊ ತಾರಾಮಣಿ, ರಾಜ್ಯಾಧ್ಯಕ್ಷ ಸೋಮಶೇಖರ, ಕಾರ್ಯದರ್ಶಿ ಪ್ರಸನ್ನಕುಮಾರ್, ಮಾದಿಹಳ್ಳಿ ಪ್ರಕಾಶ್, ಜಲಾಕ್ಷಮ್ಮ, ಮಂಗಳ ಗೌರಮ್ಯ, ತಾಲ್ಲೂಕು ಸಂಘದ ಕಾರ್ಯದರ್ಶಿ ಎಸ್.ಆರ್.ಸ್ವಾಮಿ, ಖಚಾಂಚೆ ಚಿದಾನಂದ್‌ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.