ಬೆಂಗಳೂರು: ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆಯೊಂದು ಚನ್ನಪಟ್ಟಣ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಪುರದಲ್ಲಿ ಸೋಮವಾರ ನಡೆದಿದೆ.
ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ದುರ್ದೈವಿ. ಮನೆ ಒರೆಸುವ ಸಲುವಾಗಿ ಮುಸ್ಕಾನ್ ಅವರು ಟಬ್ಗೆ ನೀರನ್ನು ತುಂಬಿಸಿ ಇಟ್ಟಿದ್ದಾರೆ. ಈ ನಡುವೆ ಮಗು ಅಲ್ಲೇ ಆಟವಾಡಿಕೊಂಡಿತ್ತು.
ಚನ್ನಪಟ್ಟಣದ ಖಾಸಗಿ ಹೋಟಲ್ ವೊಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಗುವಿನ ತಂದೆ ಶಂಷಾದ್ ಕೆಲಸ ಮುಗಿಸುಕೊಂಡು ಮನೆಗೆ ಬಂದಿದ್ದಾರೆ. ತೀವ್ರ ಬಾಯಾರಿಕೆಯಿಂದ ಹೆಂಡತಿ ಬಳಿ ಕುಡಿಯಲು ನೀರು ಕೇಳಿದ್ದಾರೆ.
ಮುಸ್ಕಾನ್ ಪತಿಗಾಗಿ ನೀರು ತರಲು ಹೋಗಿ ಬರುವಷ್ಟರಲ್ಲಿ ಮಗು ನೀರು ತುಂಬಿದ್ದ ಟಬ್ ಒಳಗೆ ಬಿದ್ದಿದೆ. ಟಬ್ಗೆ ಬಿದ್ದ ತಕ್ಷಣವೇ ಮಗುವಿಗೆ ಪ್ರಜ್ಞೆ ಕಳೆದುಕೊಂಡಿದೆ. ಇದರಿಂದ ಭಯಗೊಂಡ ಪೋಷಕರು ಕೂಡಲೇ ಹತ್ತಿರದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲೇ ಖುಷಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಸಂಬಂಧ ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC