ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಉಚಿತವಾಗಿ ದೇಶಿ ಕೋಳಿ ಮರಿಗಳನ್ನು ವಿತರಿಸಲು ಜಿಲ್ಲೆಯ ಗುಬ್ಬಿ ಹಾಗೂ ಪಾವಗಡ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರು, ಸ್ವ–ಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ಉಚಿತವಾಗಿ 5 ವಾರದ ತಲಾ 20 ದೇಶಿ ಕೋಳಿ ಮರಿಗಳನ್ನು ವಿತರಿಸಲಾಗುವುದು.
ಅರ್ಜಿಯನ್ನು ಗುಬ್ಬಿ ಹಾಗೂ ಪಾವಗಡ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿಪಿಎಲ್ ಕಾರ್ಡ್, ಭಾವಚಿತ್ರ ಸಹಿತ ಗುರುತಿನ ಚೀಟಿ/ಆಧಾರ್ ಕಾರ್ಡ್ ಪ್ರತಿ ಹಾಗೂ ಸಾಮಾನ್ಯ ಫಲಾನುಭವಿ ಹೊರತುಪಡಿಸಿ ಮೀಸಲಾತಿ ಬಯಸುವವರು ಜಾತಿ ಪ್ರಮಾಣ ಪತ್ರದ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಲಗತ್ತಿಸಿ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕೆಂದು ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC