ಹಾಸನ: ವರ್ಷಕ್ಕೊಮೆ ದರ್ಶನ ಕರುಣಿಸುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಇಂದು ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇಗುಲವನ್ನು ಬಂದ್ ಮಾಡಲಾಯಿತು.
ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಭಕ್ತರು ಆಗಮಿಸಿ, ಮಳೆಯ ನಡುವೆಯೂ ತಾಯಿಯನ್ನು ಕಣ್ತುಂಬಿ ಕೊಂಡಿದ್ದಾರೆ.
ಇದುವರೆಗೂ 26 ಲಕ್ಷಕ್ಕೂ ಹೆಚ್ಚು ಮಂದಿ ದೇವಿ ದರ್ಶನ ಪಡೆದಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ.
ವರ್ಷಕ್ಕೊಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಅ.10ರಿಂದ ಒಟ್ಟು 26ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC