ಬೆಂಗಳೂರು: ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಲು ಎಲ್ಲರಿಗೂ ಆಸೆ ಇರುತ್ತದೆ. ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ನಮಲ್ಲಿ ಡಿ.ಕೆ.ಶಿವಕುಮಾರ್, ಪರಮೇಶ್ವರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ ಸೇರಿದಂತೆ ಎಲ್ಲರೂ ಸಮರ್ಥರಿದ್ದಾರೆ. ಬಿಜೆಪಿಯಂತೆ ನಮ್ಮಲ್ಲಿ ನಾಯಕತ್ವದ ಕೊರತೆಯಿಲ್ಲ ಎಂದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸದ್ಯಕ್ಕೆ ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ಸ್ವಯಂ ಘೋಷಣೆ ಮಾಡಿ ತಾವು ಮುಖ್ಯಮಂತ್ರಿ ಎಂದು ಹೇಳಿಕೊಂಡರೆ ಆಗುವುದಿಲ್ಲ, ಜನರ ಅಭಿಪ್ರಾಯ ಇರಬೇಕು, ಶಾಸಕರು ಬೆಂಬಲ ನೀಡಬೇಕು. ಆ ಬಳಿಕ ಹೈಕಮಾಂಡ್ ಪರಿಶೀಲಿಸಿ, ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ನಮ್ಮ ಹಂತದಲ್ಲಿ ಇಂತಹ ವಿಚಾರಗಳು ಚರ್ಚೆಯಾಗುವುದು ಅನಗತ್ಯ. ಖಾತೆ ಬದಲಾವಣೆ ಬಗ್ಗೆಯೂ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೆ ಇಂತಹದೇ ಖಾತೆ ಬೇಕು ಎಂದು ಕೇಳಲು ಸಾಧ್ಯವಿಲ್ಲ. ಹೈಕಮಾಂಡ್ ಹಾಗೂ ಮುಖ್ಯಮಂತ್ರಿಯವರು ಈ ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC