ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದ್ದು, ಬಿಜೆಪಿ ಮತ್ತು ಭಾರತ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಆರೋಪಿಸಿದ್ದಾರೆ.
ಮತ ಕಳ್ಳತನದ ವಿರುದ್ಧ ಸಹಕಾರನಗರದಲ್ಲಿರುವ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕೃಷ್ಣ ಬೈರೇಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು.
ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ’ ಎಂದು ಕಿಡಿಕಾರಿದರು.
ಮಹದೇವಪುರದಲ್ಲಿ 35 ಸಾವಿರ ಅಕ್ರಮ ಮತಗಳನ್ನು ಪಟ್ಟಿಗೆ ಸೇರಿಸಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ನಿರೂಪಿಸಲಾಗಿದೆ. ಆಳಂದ ಕ್ಷೇತ್ರದಲ್ಲಿ 6 ಸಾವಿರ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಅಕ್ರಮದ ಮಾಹಿತಿ ಸೂಕ್ತ ಸಮಯಕ್ಕೆ ಶಾಸಕ ಬಿ.ಆರ್.ಪಾಟೀಲ ಗಮನಕ್ಕೆ ಬಂದ ಕಾರಣಕ್ಕೆ ಇದನ್ನು ತಡೆಯಲಾಯಿತು. ಇಲ್ಲದಿದ್ದರೆ ಅಷ್ಟೂ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗುತ್ತಿತ್ತು. ಇದು ಚುನಾವಣೆಯೊಂದರ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿತ್ತು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



