nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 26, 2025

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    By adminOctober 26, 2025No Comments2 Mins Read
    siddaramaiah

    ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.  ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಶನಿವಾರ ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸ್ವಾಭಿಮಾನಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು, ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

    ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ‌ ಸಂಸ್ಕೃತಿ.

    ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲೆಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ, ಇದು ಬಿಜೆಪಿಯ…

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.