nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    ತುಮಕೂರು October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    By adminOctober 26, 2025No Comments2 Mins Read
    valmiki

    ತುಮಕೂರು: ಅನುಸೂಚಿತ ಬುಡಕಟ್ಟು ಸಮುದಾಯದ ವಿರುದ್ಧ ಅವಮಾನಕಾರಿ, ಜಾತಿ ನಿಂದನೆ ಮಾಡಿದ ಮಾಜಿ ಸಂಸದ ರಮೇಶ್ ವಿಶ್ವನಾಥ ಕತ್ತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಶುಕ್ರವಾರ ನಗರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

    ಅನುಸೂಚಿತ ಬುಡಕಟ್ಟು ಸಮುದಾಯದ ವಿರುದ್ಧ ಜಾತಿ ನಿಂದನೆ ಮಾಡಿದ ರಮೇಶ್ ಕತ್ತಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದ ಮುಖಂಡರು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು.


    Provided by
    Provided by

    ನಗರದ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್‌.ಜಿ. ಪುರುಷೋತ್ತಮ್‌ ಮಾತನಾಡಿ, ಮಾಜಿ ಸಂಸದ ರಮೇಶ್‌ ಕತ್ತಿಯವರು ಬೆಳಗಾವಿಯಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ಅನುಸೂಚಿತ ಬುಡಕಟ್ಟು ಸಮುದಾಯವನ್ನು ಕೆಟ್ಟ ಪದಗಳಿಂದ ಅವಹೇಳಕಾರಿಯಾಗಿ ನಿಂದಿಸಿದ್ದರು. ಅವರ ವಿರುದ್ಧ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು ಎಂದು ಮನವಿ ಮಾಡಿದರು.

    ರಮೇಶ್‌ ಕತ್ತಿ ಬಳಸಿರುವ ಪದ ಅತ್ಯಂತ ನಿಂದನೀಯ, ಮಾನಹಾನಿಕಾರಕ, ಬುಡಕಟ್ಟು ಸಮುದಾಯದ ಗೌರವವನ್ನು ಕುಗ್ಗಿಸುವ ಉದ್ದೇಶದಿಂದಲೇ ಹೇಳಲಾಗಿದೆ. ಇವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಈ ವೇಳೆ ಅಡಿಷನಲ್ ಎಸ್ಪಿಯವರಿಗೆ ಮನವಿ ಪತ್ರ ಸಲ್ಲಿಸಿ ವಿನಂತಿಸಿದರು.

    ವಾಲ್ಮೀಕಿ ಸೇನೆ ರಾಜ್ಯಾಧ್ಯಕ್ಷ ಪ್ರತಾಪ್‌ ಮದಕರಿ ಮಾತನಾಡಿ, ಬೇಡ ಸಮುದಾಯದ ಬಗ್ಗೆ ರಮೇಶ್‌ ಕತ್ತಿಯ ಪದಬಳಕೆ ಸಹಿಸಲು ಸಾಧ್ಯವಿಲ್ಲ. ಈ ಸಮುದಾಯವನ್ನು ನಿಂದನೆ ಮಾಡುವ ಹಾಗೂ ಸಾಮಾಜಿಕ ವೈಷಮ್ಯ ಉಂಟು ಮಾಡುವ ಉದ್ದೇಶದಿಂದಲೇ ಅಂತಹ ಪದ ಬಳಸಿದ್ದಾರೆ. ಸಂವಿಧಾನಾತ್ಮಕವಾಗಿ ಸಮುದಾಯಕ್ಕೆ ದೊರೆತಿರುವ ಸಮಾನತೆ ಮತ್ತು ಮಾನವ ಗೌರವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.

    ಈ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು. ಕಾಯ್ದೆ ಪ್ರಕಾರ ತಕ್ಷಣ ಬಂಧನ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡುವುದಲ್ಲದೆ, ಎಲ್ಲಾ ಪೊಲೀಸ್ ಠಾಣೆಗಳಲ್ಲೂ ರಮೇಶ್‌ ಕತ್ತಿ ವಿರುದ್ಧ ದೂರು ದಾಖಲಿಸುವುದಾಗಿ ಪ್ರತಾಪ್‌ ಮದಕರಿ ಎಚ್ಚರಿಕೆ ನೀಡಿದರು.

    ವಾಲ್ಮೀಕಿ ನಾಯಕ ನೌಕರರ ಸಂಘದ ಗೌರವಾಧ್ಯಕ್ಷ ಪಿ.ಬಿ.ಬಸವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಲಕ್ಷ್ಮೀನಾರಾಯಣ, ಮುಖಂಡರಾದ ಮೃತ್ಯುಂಜಯ, ದೊಡ್ಡಓಬಳಯ್ಯ, ಮುಳುಕುಂಟೆ ಅಶ್ವತ್ಥಯ್ಯ, ತಿಪ್ಪೇಸ್ವಾಮಿ, ರುದ್ರಪ್ಪ, ರಾಮಾಂಜಿನಿ, ಮುತ್ತುರಾಯಪ್ಪ, ಶ್ರೀರಂಗಯ್ಯ ಮೊದಲಾದವರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.