ತುಮಕೂರು: ನವೆಂಬರ್ ತಿಂಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಪ್ರಯುಕ್ತ ‘ಸರ್ದಾರ್ 150’ ಏಕತಾ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಸರ್ದಾರ್ 150’ ಪಾದಯಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾದಯಾತ್ರೆಯ ಮೂಲಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ರಾಷ್ಟ್ರ ಏಕೀಕರಣದ ಪಾತ್ರ, ಸಾಹಸ, ಆಡಳಿತ ಹಾಗೂ ದೇಶಭಕ್ತಿಯ ಸಂದೇಶವನ್ನು ಯುವ ಪೀಳಿಗೆಗೆ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಶಿಬಿರ, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಸ್ವಚ್ಛತಾ ಕಾರ್ಯಕ್ರಮ, ಜಾಗೃತಿ ಜಾಥಾ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ಪ್ರಾರಂಭಿಸುವಂತೆ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಶ್ರೀವಾಣಿ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಈಶ್ವರಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
 
		 
					
					 


