nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ
    ಕೊರಟಗೆರೆ November 2, 2025

    ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ

    By adminNovember 2, 2025No Comments2 Mins Read
    nss

    ಕೊರಟಗೆರೆ : ಇಂದಿನ ಯುವಜನತೆ ಅನಾವಶ್ಯಕ ವಿಷಯಗಳಲ್ಲಿ ತೊಡಗಿಕೊಳ್ಳುವುದರಿಂದ ತಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜೀವನದ ಗುರಿಯನ್ನು ಅರಿತು, ಉತ್ತಮ ಭವಿಷ್ಯ ಮತ್ತು ಸಮಾಜ ನಿರ್ಮಾಣಕ್ಕೆ ಅಗತ್ಯವಾದ ವಿಷಯಗಳತ್ತ ಕೇಂದ್ರೀಕರಿಸಬೇಕು, ಎಂದು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ತಿಳಿಸಿದರು.

    ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದಲ್ಲಿ ಬೆಂಗಳೂರಿನ ವಿವೇಕಾನಂದ ಮಹಿಳಾ ಕಾಲೇಜಿನ ಎನ್‌ ಎಸ್‌ ಎಸ್‌ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾತನಾಡಿದರು.


    Provided by
    Provided by

    ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ತಮ್ಮ ಜೀವನವನ್ನೇ ಮುಡುಪಾಗಿಡುತ್ತಾರೆ, ಅವರ ತ್ಯಾಗದ ಬೆಲೆ ಮಕ್ಕಳಿಗೆ ಅರಿವಾಗಬೇಕು, ಯಾವುದೇ ಅಡ್ಡದಾರಿಗಳನ್ನೂ ತುಳಿಯದೆ, ಶ್ರದ್ಧೆ, ಶ್ರಮ ಮತ್ತು ನೈತಿಕತೆಯಿಂದ ಓದಬೇಕು. ನಿಜವಾದ ಶಿಕ್ಷಣ ಎಂದರೆ ಕೇವಲ ಪುಸ್ತಕದ ಅಕ್ಷರಗಳಲ್ಲ, ಅದು ವ್ಯಕ್ತಿತ್ವದ ಬೆಳವಣಿಗೆಯ ಮಾರ್ಗವಾಗಿದ್ದು ಇದನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಸಲಹೆ ನೀಡಿದರು.

    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಮಾತನಾಡಿ, ಹೆಣ್ಣು ಮಕ್ಕಳ ಶಿಕ್ಷಣವು ರಾಷ್ಟ್ರದ ಪ್ರಗತಿಯ ಮೂಲ. ಹೆಣ್ಣೊಂದು ಕಲಿತರೆ ಮನೆ, ಶಾಲೆ, ಸಮಾಜ ಎಲ್ಲವೂ ಬೆಳಗುತ್ತದೆ, ಕಾಲೇಜಿನಲ್ಲಿ ಓದುತ್ತಿರುವ ಪ್ರತಿಯೊಬ್ಬ ಹೆಣ್ಣು ವಿದ್ಯಾರ್ಥಿನಿಯೂ ನಾಳೆಯ ಭಾರತದ ಆಸ್ತಿಯಾಗಬೇಕು. ನಿಮ್ಮೊಳಗಿರುವ ಶಕ್ತಿ ಮತ್ತು ಬುದ್ಧಿ ದೇಶದ ಅಭಿವೃದ್ಧಿಗೆ ಉಪಯೋಗವಾಗಲಿ. ಸಾಮಾಜಿಕ ಸೇವೆ ಮತ್ತು ಶಿಕ್ಷಣ ಒಂದಾಗಿ ಬಂದಾಗ ಮಾತ್ರ ನಿಜವಾದ ಸಾಂಸ್ಕೃತಿಕ ಪುನರುತ್ಥಾನ ಸಾಧ್ಯ ಎಂದರು.

    ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿದ್ದ  ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ ಮಾತನಾಡಿ ಸಂಸ್ಕೃತಿ ಎಂದರೆ ಕೇವಲ ಶ್ಲೋಕಗಳ ಪಠಣವಲ್ಲ, ಅದು ಮಾನವೀಯತೆ, ವಿನಯ, ಶಾಂತಿ, ಮತ್ತು ಪರೋಪಕಾರದ ಮೌಲ್ಯಗಳಲ್ಲಿ ಅಡಕವಾಗಿದೆ, ಇಂದಿನ ಯುವಕರು ಆಧ್ಯಾತ್ಮ ಮತ್ತು ವಿಜ್ಞಾನವನ್ನು ಸಮತೋಲನದಲ್ಲಿಟ್ಟುಕೊಂಡು ಬದುಕಲು ಕಲಿಯಬೇಕು, ವಿವೇಕಾನಂದರು ಹೇಳಿದಂತೆ, ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು ಯುವಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿ, ಸಮಾಜದ ಹಿತದತ್ತ ಪ್ರಯೋಗಿಸಿದರೆ, ಭಾರತ ಮತ್ತೊಮ್ಮೆ ಜಗತ್ತಿಗೆ ದಾರಿ ತೋರಿಸಬಲ್ಲದು ಎಂದು ಸಂದೇಶ ನೀಡಿದರು

    ಸಮಾರೋಪ ಸಮಾರಂಭದದಲ್ಲಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಅದೇ ರೀತಿ ಹಲವು ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆದವು.

    ಕಾರ್ಯಕ್ರಮದಲ್ಲಿ ಎಲೆರಾಂಪುರ ಗ್ರಾ.ಪಂ ಅಧ್ಯಕ್ಷೆ ಗೀತಾ ನರಸಿಂಹರಾಜು, ಕಾಲೇಜಿನ ಪ್ರಾಂಶುಪಾಲರಾದ ತ್ರಿವೇಣಿ, ವಾಣಿ. ಸಂಸ್ಕೃತ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ಡಾ.ನಂಜುಂಡಯ್ಯ, ಕೆ.ಆರ್.ಪೇಟೆಯ ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕ ಡಾ. ಕುಮಾರಸ್ವಾಮಿ, ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ನಿರ್ದೇಶಕ ನಂಜೇಗೌಡ ನಂಜುಂಡ, ಮಠದ ವ್ಯವಸ್ಥಾಪಕ ಗೋವಿಂದರಾಜು, ಸಂತೋಷ್ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಯರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪೋಷಕರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ತುಮಕೂರು: ರಾಜ್ಯಾದ್ಯಂತ ಜೂನ್ 28 ರಿಂದ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅಲೆಮಾರಿ ಜನ ಸಮುದಾಯವನ್ನೂ ಗಮನದಲ್ಲಿಟ್ಟುಕೊಂಡು ಪೂರ್ಣ ಪ್ರಮಾಣದಲ್ಲಿ…

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.