ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು–ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಹಾಗೂ ಆಂಧ್ರ ಪ್ರದೇಶದ ಚೌಲೂರು ಗ್ರಾಮದ ಐವರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥರಾಗಿರುವ ನಾಗರಾಜು ಮತ್ತು ನಿಂಗಕ್ಕ ಎಂಬವರನ್ನು ಹಿಂದೂಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೆರಿಯೂರು ಗ್ರಾಮದ ಮಾರಪ್ಪ ದಾಸಪ್ಪ ಚಿಕ್ಕನರಸಿಂಹಯ್ಯ ಹಾಗೂ ಟಿ. ನಾಗರಾಜು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಳಿದವರು ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.
ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


