nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ November 4, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    By adminNovember 4, 2025No Comments1 Min Read
    meti

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಮೇಟಿಯವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ. ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,  ಮೇಟಿಯವರು ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.


    Provided by
    Provided by

    ಜನರೊಂದಿಗಿನ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದರಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

    ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ಸ್ಥಳಾಂತರಿಸಲಾಗುವುದು. ನಾಳೆ ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಮೇಟಿಯವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಪಾಲ್ಗೊಳ್ಳಲಿದ್ದೇನೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.