ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 10.50 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ತುಮಕೂರು ತಾಲ್ಲೂಕು ಹೆತ್ತೂರು ಹೋಬಳಿ ಬಿದರೆಕಟ್ಟೆ ಮಾಕನಹಳ್ಳಿ ಗ್ರಾಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.15 ಗಂಟೆಗೆ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಎಸ್.ಎಲ್.ಎನ್. ಕನ್ವೆನ್ಸನ್ ಹಾಲ್ ಕಲ್ಯಾಣ ಮಂಟಪದ ಉದ್ಘಾಟನೆ ಹಾಗೂ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ತದನಂತರ ಮಧ್ಯಾಹ್ನ 2.15 ಗಂಟೆಗೆ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್‌ನಿಂದ ರಸ್ತೆ ಮೂಲಕ ಹೊರಟು 2.30 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ತುಮಕೂರು ಜಿಲ್ಲಾ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ತುಮಕೂರು ತಾಲ್ಲೂಕು ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 30 ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟನೆ(ವರ್ಚುಯಲ್), ತುಮಕೂರು ನಗರದ 2ನೇ ಹಂತದ ಒಳಚರಂಡಿ ಯೋಜನೆಯಡಿ ನಿರ್ಮಿಸಿರುವ 25 ಎಂ.ಎಲ್.ಡಿ. ಸಾಮರ್ಥ್ಯದ ಎಸ್.ಬಿ.ಆರ್. ತಾಂತ್ರಿಕತೆಯ ಮಲಿನ ನೀರು ಸಂಸ್ಕರಣಾ ಘಟಕದ ಉದ್ಘಾಟನೆ(ವರ್ಚುಯಲ್), ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ(ಹಂತ–2)ಯಡಿ ಕೈಗೊಳ್ಳುವ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ, ಎಲ್.ಜಿ.ಟಿ, ಅನುದಾನದಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣ/ಉನ್ನತೀಕರಣಗೊಳಿಸುವ ಕಾಮಗಾರಿಗಳಿಗೆ ಭೂಮಿ ಪೂಜೆ, ತುಮಕೂರು ನಗರದ ದಿಟ್ಟೂರು ಹಾಗೂ ದೋಬಿಘಾಟ್‌ನಲ್ಲಿ 2 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಬಳಿಕ ಮುಖ್ಯಮಂತ್ರಿಗಳು ಮಧ್ಯಾಹ್ನ 3.55 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ಜಿಲ್ಲೆಗೆ ತೆರಳುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


