ಸರಗೂರು: ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಮತ್ತು ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರು, ಮುಖಂಡರು ಅಭಿನಂದನೆ ಸಲ್ಲಿಸಿದರು.
ನಂತರ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ತಾಲೂಕಿನ ದೊಡ್ಡ ಗ್ರಾಮಗಳ ಪೈಕಿ ಒಂದಾದ ಜಯಲಕ್ಷೀಪುರಗೆ ಸಾರಿಗೆ ಬಸ್ ವ್ಯವಸ್ಥೆಯೇ ಇರಲಿಲ್ಲ. ಇದರಿಂದ ಗ್ರಾಮದಿಂದ ವಿವಿಧ ಪಟ್ಟಣಕ್ಕೆ ಹೋಗುವಂತಹ ಸಾರ್ವಜನಿಕರು, ವಿದ್ಯಾಭ್ಯಾಸಕ್ಕೆ ಹೋಗುವಂತಹ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗಿತ್ತು. ನಮ್ಮ ಗ್ರಾಮದಿಂದ ಮೂಗತನಮೂಲೆ ವರಗೂ ಮೂರರಿಂದ ನಾಲ್ಕು ಕಿ.ಮೀ. ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹಲವು ವರ್ಷಗಳಿಂದ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ನಮ್ಮ ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ನಮ್ಮ ಮನವಿ ಸ್ಪಂದಿಸಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.
ನಮ್ಮ ಗ್ರಾಮಗಳು ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ತುಂಬಾ ಸಮಸ್ಯೆ ಉಂಟಾಗಿತ್ತು. ನಾವುಗಳು ಸಾರಿಗೆ ಅಧಿಕಾರಿಗಳಿಗೆ ವರ್ಷಗಳ ಕಾಲ ಕಚೇರಿಗೆ ಭೇಟಿ ನೀಡಿ ಬೇಸತ್ತುಯಾಗಿತ್ತು. ಶಾಸಕರ ಗಮನಕ್ಕೆ ತಂದು ಕೂಡಲೇ ಬಸ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದರು.
ಗ್ರಾಮಸ್ಥರ ಮನವಿ ಮೇರೆಗೆ ಎಚ್.ಡಿ.ಕೋಟೆ ಡಿಪೋದಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದ್ದು, ಸರಗೂರು ದಿಂದ ಜಯಲಕ್ಷೀಪುರ ಮಾರ್ಗವಾಗಿ ಚಿಕ್ಕಬರಗಿ, ಮುತ್ತಿಗೆಹುಂಡಿ ಮಾರ್ಗವಾಗಿ ಅದೇ ಸರಗೂರು ತೆರಳಲು ಮಾರ್ಗವಾಗಿ ಸಂಚರಿಸುವ ಇನ್ನೊಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರತಿ ದಿನ ಬೆಳಗ್ಗೆ– ಮಧ್ಯಾಹ್ನ.ಸಂಜೆ ನಾಲ್ಕು ಸಮಯದಲ್ಲಿ ಸಂಚರಿಸಲಿವೆ. ಇದರಿಂದ ಗ್ರಾಮಸ್ಥರು ತಾಲೂಕು ಕೇಂದ್ರವಾದ ಸರಗೂರು, ಮೈಸೂರು ಸೇರಿದಂತೆ ಇನ್ನಿತರೆ ಗ್ರಾಮಗಳಿಗೆ ಸಂಚರಿಸಲು ಅನುಕೂಲವಾಗಿದೆ. ಹಾಗಾಗಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಂತಹ ಸಾರಿಗೆ ಸಂಸ್ಥೆಯ ಅಧಿಕಾರಿಗಳು, ಬಸ್ ಚಾಲಕ, ನಿರ್ವಾಹಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಮಹಿಳೆಯರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


