ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ.
ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ವೇಳೆ ಆರೋಪಿಯು ನಕಲಿ ಆಧಾರ್ ಕಾರ್ಡ್ ನ್ನು ಲಾಡ್ಜ್ ಸಿಬ್ಬಂದಿ ನೀಡಿರುವುದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


