ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಎರಡು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಂಡು ರೈತರಲ್ಲಿ ಆತಂಕವನ್ನುಂಟು ಮಾಡಿತ್ತು. ಪೊದೆಯಲ್ಲಿ ಅಡಗಿ ಕುಳಿತ ಚಿರತೆಯನ್ನು ಬಲೆ ಬೀಸಿ ಸೆರೆ ಹಿಡಿಯಲಾಯಿತು. ಅರಣ್ಯ ಅಧಿಕಾರಿ ಸುರೇಶ್, ಮುತ್ತುರಾಜ್ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


