ಔರಾದ: ರಾಜ್ಯಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಔರಾದ ತಾಲೂಕಿನ ಜೋಜನ ಗ್ರಾಮದ ಡಾ.ಸತ್ಯಕ್ಕ ಗಡ್ಡೆ ಆಯ್ಕೆಯಾಗಿದ್ದಾರೆ.
ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ(ರಿ) ಬೀದರ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ. ಸತ್ಯಕ್ಕ ಗಡ್ಡೆ ಅವರು ಆಯ್ಕೆಯಾಗಿದ್ದು, ನವೆಂಬರ್ 10ರಂದು (ಇಂದು) ಬೀದರನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ(ರಿ) ಬೀದರ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷ ಆಯೋಜಿಸುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಜೋಜನ ಗ್ರಾಮದ ಡಾ. ಸತ್ಯಕ್ಕ ಗಡ್ಡೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.10ರಂದು (ಇಂದು) ಬೀದರನ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


