ತಿಪಟೂರು: ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಅಳವಡಿಸಿರುವ ಸಿಗ್ನಲ್ ಗಳು ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಪದೇ ಪದೇ ಕೆಟ್ಟು ಹೋಗುತ್ತಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ನಗರಸಭೆ ಎದುರು, ನಗರದ ಸಿಂಗೀ ನಂಜಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಅಳವಡಿಸಿರುವ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಸಿಗ್ನಲ್ ನಿಂತುಹೋಗುವ ಘಟನೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಯಾವುದೇ ವೃತ್ತದಲ್ಲಿ ವಾಹನ ಸಂಚಾರ ನಿಯಂತ್ರಣ ಮಾಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ರಾಫಿಕ್ ರೂಲ್ಸ್ ನಾವು ಪಾಲಿಸುತ್ತೇವೆ. ಆದ್ರೆ ಸಿಗ್ನಲ್ ಗಳೇ ಕಾರ್ಯ ನಿರ್ವಹಿಸದಿದ್ದರೆ, ಸಾರ್ವಜನಿಕರು ಹೇಗೆ ಸಂಚಾರಿ ನಿಯಮವನ್ನು ಪಾಲಿಸಬೇಕು ಅಂತ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


