nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    ತುಮಕೂರು November 11, 2025

    ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್

    By adminNovember 11, 2025No Comments1 Min Read
    tumakuru

    ತುಮಕೂರು: ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ, ಸರ್ಕಾರದಲ್ಲಿ ಸೊರಗಿದ ಕನ್ನಡ ಪ್ರೇಮ ವಿಚಾರಗಳು ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲೂ ಪ್ರತಿಧ್ವನಿಸಿದವು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಸುಫಿಯ ಕಾನೂನು ಮಹಾವಿದ್ಯಾಲಯದಿಂದ ಅಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳ ವಲಯ ಮಟ್ಟದ `ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ ಕಲಾಪದ ಬಗ್ಗೆ ಪರಿಚಯಿಸಿತು.


    Provided by
    Provided by

    ತೀರ್ಪುಗಾರರು ಸ್ಪರ್ಧಾರ್ಥಿಗಳಿಗೆ ಮಾದರಿ “ನಡೆ ನುಡಿ ಕುರಿತು ತಿಳಿಸಿಕೊಟ್ಟರು.  ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

    ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ವಿಂಗಡಿಸಿ ಸ್ಪರ್ಧೆಗೆ ಅಣಿಗೊಳಿಸಲಾಯಿತು. ವಿಧಾನಸಭಾ ಸಭಾಪತಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಾಗಿಯೂ ಕೆಲವರು ಗಮನ ಸೆಳೆದರು.

    ‘ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. 100 ಜನ ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆಯಾದರೆ ಕನಿಷ್ಠ ಒಬ್ಬರಿಗೂ ಕೂಡ ಶಿಕ್ಷೆಯಾಗುತ್ತಿಲ್ಲ’ ಎಂದು ಪ್ರಶೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ಶಾಸಕರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದರು.

    ‘ಪೋಕ್ಸೊ ನಿಯಂತ್ರಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಜಾಗೃತಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಡಿಜಿಟಲ್ ಮೂಲಕವೂ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ’ ಎಂದು ಗೃಹ ಮಂತ್ರಿ ಸ್ಪಷ್ಟನೆ ನೀಡಿದರು.

    ವಿಧಾನಸಭೆ ಅಧಿವೇಶನದಂತೆ ಇಲ್ಲಿಯೂ ವಿಪಕ್ಷ ಶಾಸಕರು ಮತ್ತು ಸಚಿವರ ಮಧ್ಯೆ ವಾಗ್ವಾದ ನಡೆಯಿತು.  ತೀರ್ಪುಗಾರರು ಮಧ್ಯಪ್ರವೇಶಿಸಿ, ಅನಾವಶ್ಯಕವಾಗಿ ಗೊಂದಲ ಉಂಟು ಮಾಡಿದರೆ ಅಂಕ ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

    ಗ್ರಂಥಾಲಯದಲ್ಲಿ ಪುಸ್ತಕ ಕೊರತೆ, ಮುಚ್ಚುವ ಹಂತ ತಲುಪಿದ ಸರ್ಕಾರಿ ಶಾಲೆ, ಗುಣಮಟ್ಟದ ಶಿಕ್ಷಣದ ಕೊರತೆ ಸೇರಿ ಹಲವು ವಿಚಾರಗಳು ಕುರಿತು ಚರ್ಚೆ ನಡೆಸಿದರು. ತೀರ್ಪುಗಾರರು ಎಲ್ಲರ ನಡೆ–ನುಡಿ ಗಮನಿಸಿ ಅಂಕ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.