ಕೂಡ್ಲಿಗಿ: ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು , ಶಿಕ್ಷಕರು ವಿದ್ಯಾರ್ಥಿಗಳಿಗೆ ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕಿದೆ ಎಂದು ಸಮಾಜ ಸೇವಕರು ಹಾಗೂ ಸ್ನೇಹಿತರ ಬಳಗದ ಅಧ್ಯಕ್ಷರಾದ , ಬಿ.ಅಬ್ದುಲ್ ರಹಮಾನ್ ನುಡಿದರು.
ಡಾಕ್ಟರ್ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹುಟ್ಟು ಜನ್ಮದಿನದ ಪ್ರಯುಕ್ತ. ಮೌಲಾನಾ ಅಬುಲ್ ಕಲಾಂ ಆಜಾದ್ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಉರ್ದು ಶಾಲೆಯ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಹಾಗೂ ಅಬುಲ್ ಕಲಾಂ ಆಜಾದ್ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದರು.
ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಇಸ್ಲಾಂ, ಬೌದ್ಧ, ಸಿಖ್ ಸೇರಿದಂತೆ, ಸರ್ವರಲ್ಲಿಯೂ ಮಾನವೀಯ ಮೌಲ್ಯಗಳ ಮೂಲಕ, ಏಕತೆಯನ್ನು ತೋರಿಸಿಕೊಟ್ಟ ಮಹಾನ್ ವ್ಯಕ್ತಿ ಅಬುಲ್ ಕಲಾಂರವರಾಗಿದ್ದಾರೆ. ಅವರು ಆಜಾದ್ ಸ್ವತಂತ್ರ ಹೋರಾಟಗಾರರು, ಸರ್ವರಲ್ಲಿಯೂ ಏಕತೆಯನ್ನು ಸಾರಿದವರು ಎಂದರು.
ಮೌಲಾನಾ ಅಬುಲ್ ಕಲಾಂ ಆಜಾದ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಾಮಕೃಷ್ಣ, ಉರ್ದು ಶಾಲೆಯ ಮುಖ್ಯ ಶಿಕ್ಷಕ ಅನಂತಕುಮಾರ್, ವಿಶ್ವಚೇತನ ಸಂಸ್ಥೆಯ ಅಧ್ಯಕ್ಷರಾದ ಕರಿಬಸಮ್ಮ ಮಾತನಾಡಿದರು.
ಸ್ನೇಹಿತರ ಬಳಗದ ಸದಸ್ಯರಾದ ಅಬ್ದುಲ್ ಜಬ್ಬಾರ್ , ಫಯಾಜ್ , ರೈಲ್ವೇ ಇಲಾಖೆಯ ನೌಕರ ಅಬ್ದುಲ್ ವಾಹಿದ್ , ಉರ್ದು ಶಾಲೆಯ ಶಿಕ್ಷಕರಾದ ಪರ್ವೀನ್, ರಮೇಶ್ ರೇಷ್ಮಾ, ತನುಜಾ, ಹಾಗೂ ಸಿಬ್ಬಂದಿ ವರ್ಗದವರು, ಪಾಲಕರು, ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಂತರ ಶಾಲಾ ಮಕ್ಕಳು , ಪಟ್ಟಣದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಜಾಗೃತೆ ಜಾಥಾ ನಡೆಸಿದರು.
ವರದಿ: ವಿ.ಜಿ.ವೃಷಭೇಂದ್ರ, ಕೂಡ್ಲಿಗಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


