ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿ, ಡಿಕೆಶಿ ಸಿಎಂ ಆಗಲಿ ಎಂದು ಪ್ರಾರ್ಥಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಹುಲಿಯೂರಮ್ಮ ದೇವಸ್ಥಾನದಲ್ಲಿ ಈ ಚಂಡಿಕಾ ಹೋಮ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಹುಲಿಯೂರುದುರ್ಗ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ದಂಪತಿ, ವಿ.ಎಸ್.ಎಸ್.ಎನ್. ಅಧ್ಯಕ್ಷ ಮಧು ದಂಪತಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ದಂಪತಿ, ಪಂಚಾಯಿತಿ ಸದಸ್ಯ ನಾಗೇಶ್ ದಂಪತಿ ಸೇರಿದಂತೆ ಹಲವು ನಾಯಕರು ಹೋಮ ಹವನದಲ್ಲಿ ಪಾಲ್ಗೊಂಡಿದ್ದರು.
ಕುಣಿಗಲ್ ಶಾಸಕ ರಂಗನಾಥ್ ಹೋಮ ಹವನದಲ್ಲಿ ಭಾಗಿಯಾಗಿ ಮಾತನಾಡಿ, ಹುಲಿಯೂರಮ್ಮ ದೇವಾಲಯ ಬಹುಶಕ್ತಿಯ ಸ್ಥಳ. ಹಿಂದೆಯೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಹಳೆಊರಮ್ಮ ದೇವಾಲಯಕ್ಕೆ ಬಂದು ಆಶೀರ್ವಾದ ಪಡೆದಿದ್ದರು. ಇದೇ ರೀತಿಯಾಗಿ ಈ ಬಾರಿ ನಮ್ಮ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸ್ ಪಕ್ಷದ ಎಲ್ಲ ನಾಯಕರಿಗೂ ಒಳ್ಳೆಯದು ಆಗಲಿ ಎಂಬ ಸಂಕಲ್ಪದ ಪೂಜೆ ನಡೆಸಲಾಗಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


