nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    ಮಧುಗಿರಿ November 16, 2025

    ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

    By adminNovember 16, 2025No Comments2 Mins Read
    madhugiri

    ಮಧುಗಿರಿ: ರಾಜ್ಯ ಸರ್ಕಾರ ಎರಡೂವರೆ ವರ್ಷದಲ್ಲಿ 5,800 ಬಸ್‌ ಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

    ಪಟ್ಟಣದ ಹಿಂದೂಪುರ ರಸ್ತೆಯಲ್ಲಿರುವ ಪಾಳ್ಯದಹಳ್ಳಿ ಸಮೀಪ ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದೊಂದಿಗೆ ಶನಿವಾರ ನಡೆದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷಾ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ರಾಜ್ಯದಲ್ಲಿ ಈಗಾಗಲೇ 45 ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷಾ ಪಥ ನಿರ್ಮಿಸಲಾಗುತ್ತಿದೆ. ಏಳು ಟ್ರ್ಯಾಕ್ ಚಾಲನೆಯಲ್ಲಿವೆ. 28 ಟ್ರ್ಯಾಕ್ ಬಾಕಿಯಿದ್ದು, ಈ ವರ್ಷ 10 ಟ್ರ್ಯಾಕ್ ನಿರ್ಮಾಣಕ್ಕೆ ಟೆಂಡರ್ ಆಗಿದ್ದು ಶೀಘ್ರ ಕಾಮಗಾರಿ ಪೂರ್ಣಗೊಳ್ಳುವುದು. ನರೇಂದ್ರ ಮೋದಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಗುಜರಾತ್‌ನಲ್ಲಿ ಈ ರೀತಿ ಅಭಿವೃದ್ಧಿಯಾಗಿಲ್ಲ ಎಂದರು.

    ಮಧುಗಿರಿಯಲ್ಲಿ ಸಾರಿಗೆ ವಿಭಾಗೀಯ ಕಚೇರಿಯನ್ನು ಶೀಘ್ರ ಮಂಜೂರು ಮಾಡಲಾಗುವುದು. ಸಾರಿಗೆ ಬಸ್‌ ನಿಲ್ದಾಣ ನವೀಕರಣಕ್ಕೆ ಆದ್ಯತೆ ಹಾಗೂ ತಾಲ್ಲೂಕಿಗೆ ಮತ್ತಷ್ಟು ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.

    ಶಾಸಕ ಕೆ.ಎನ್‌. ರಾಜಣ್ಣ ಮಾತನಾಡಿ, ಮಧುಗಿರಿ ಜಿಲ್ಲಾ ಕೇಂದ್ರ ಮಾಡಬೇಕು ಎಂಬುದು ನಮ್ಮ ಗುರಿ. ಈಗಾಗಲೇ ಜಿಲ್ಲಾಧಿಕಾರಿ ಕಚೇರಿ, ಎಸ್.ಪಿ. ಕಚೇರಿ ಹೊರತುಪಡಿಸಿ ಎಲ್ಲ ಕಚೇರಿಗಳನ್ನು ಪ್ರಾರಂಭಿಸಲಾಗಿದೆ. ಕೇಬಲ್ ಕಾರ್ ಬಗ್ಗೆ ಸಲಹೆ ಪಡೆದು ಅದಷ್ಟು ಬೇಗ ಕಾಮಗಾರಿ ಕೈಗೊತ್ತಿಕೊಳ್ಳಲಾಗುವುದು. ತುಮಕೂರಿನ ಸಿದ್ಧಗಂಗಾ ಮಠಕ್ಕೆ 500ಕ್ಕೂ ಹೆಚ್ಚು ಮಕ್ಕಳು ಶಾಲೆ, ಕಾಲೇಜುಗಳಿಗೆ ತೆರಳುತ್ತಿದ್ದು, ಬಸ್‌ ಗಾಗಿ ಪರದಾಡುತ್ತಿದ್ದಾರೆ. ಬೆಳಿಗ್ಗೆ ಮತ್ತು ಸಂಜೆ ಮಠದಿಂದ ತುಮಕೂರು ಬಸ್ ನಿಲ್ದಾಣದವರೆಗೆ ಬಸ್‌ ಸೌಕರ್ಯ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

    ಕೆಎಸ್‌ ಆರ್‌ ಟಿಸಿ ವ್ಯವಸ್ಥಾಪಕ ಅಕ್ರಂ ಪಾಷ ಮಾತನಾಡಿ, ಮಧುಗಿರಿ ಈಗಾಗಲೇ ಶೈಕ್ಷಣಿಕ ಜಿಲ್ಲೆಯಾಗಿದ್ದು, ಶೀಘ್ರದಲ್ಲೇ ಕಂದಾಯ ಜಿಲ್ಲೆಯಾಗುವ ಎಲ್ಲ ಲಕ್ಷಣಗಳೂ ಇವೆ ಎಂದರು.

    ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ. ಪ್ರಸಾದ್, ತಾ.ಪಂ ಇಒ ಲಕ್ಷ್ಮಣ್, ಸಾರಿಗೆ ಆಯುಕ್ತ ಓಂಕಾರೇಶ್ವರಿ, ಜಂಟಿ ಸಾರಿಗೆ ಅಯುಕ್ತ ಗಾಯತ್ರಿದೇವಿ, ರೇಷ್ಮೆ ಇಲಾಖೆ ಹೆಚ್ಚುರಿ ನಿರ್ದೇಶಕ ವೈ.ಟಿ. ತಿಮ್ಮಯ್ಯ, ಉಪ ನಿರ್ದೇಶಕ ಲಕ್ಷ್ಮೀನರಸಯ್ಯ, ಸಹಾಯಕ ನಿರ್ದೇಶಕ ಮೋಹನ್‌, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಜಿ.ಜೆ ರಾಜಣ್ಣ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣಾರೆಡ್ಡಿ, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಂಗಪ್ಪ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು…

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.