ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವದ ನೆನಪಿಗಾಗಿ ನ.19ರಂದು ಹಿಂದುಳಿದ ವರ್ಗಗಳ ಆಯೋಗದ ಕರ್ನಾಟಕ ರಾಜ್ಯ ವತಿಯಿಂದ ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಬೆಂಗಳೂರಿನ ಮಿಲ್ಲರ್ ಬ್ಯಾಂಕ್ ಏರಿಯಾ ದೇವರಾಜು ಅರಸು ಭವನದಲ್ಲಿ ಅಂದು ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು, ಹಾವನೂರು ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್.ತಂಗಡಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಭೈರತಿ ಸುರೇಶ್, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಿಜ್ವಾನ್ ಹರ್ಷದ್, ಡಾ.ಶಾಲಿನಿ ರಜನೀಸ್, ಪ್ರೊ. ರವಿವರ್ಮಕುಮಾರ್ ಉಪಸ್ಥಿತರಿರುವರು. ಶಿಲ್ಪಿ ಪುಟ್ಟಸ್ವಾಮಿ ಗುಡಿಗಾರ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


