ಮಧುಗಿರಿ: ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ.
ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ, ಪುರಸಭೆ, ಡಿವೈಎಸ್ ಪಿ ಕಚೇರಿ, ಶಾಲಾ- ಕಾಲೇಜು ತಹಶೀಲ್ದಾರ್ ಕಚೇರಿ ಸೇರಿದಂತೆ ಬಹುತೇಕ ವಾರ್ಡ್‌ಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಪಾಡಂತು ಹೇಳತೀರದು. ರೋಗ ನಿವಾರಣೆಗಾಗಿ ಆಸ್ಪತ್ರೆ ದಾಖಲಾದರೆ, ಸೊಳ್ಳೆಗಳ ಕಡಿತದಿಂದ ರೋಗ ಉಲ್ಬಣವಾಗುವ ಆತಂಕ ಎದುರಾಗಿದೆ ಎಂದು ಇಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದ ದೊಡ್ಡ ದೊಡ್ಡ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದ ಕಸ ಮತ್ತು ಕಡ್ಡಿ ಕಟ್ಟಿಕೊಂಡು ಅನುಪಯುಕ್ತ ಗಿಡಗಳು ಅಳೆತ್ತರ ಬೆಳೆದಿರುವುದರಿಂದ ಸೊಳ್ಳೆಗಳ ಅವಾಸ ಸ್ಥಾನವಾಗಿದೆ. ಸೊಳ್ಳೆಗಳ ಸಂತತಿ ಹೆಚ್ಚಾಗಿ ಜನರ ರಕ್ತ ಹೀರತೊಡಗಿವೆ.
ಪಟ್ಟಣ ವ್ಯಾಪ್ತಿಯ ಕೆಲವು ಬಡಾವಣೆಯಲ್ಲಿ ಸ್ವಚ್ಛತೆ ಇಲ್ಲವಾಗಿದ್ದು, ಚರಂಡಿಗಳು ಸೊಳ್ಳೆ ಉತ್ಪತ್ತಿ ತಾಣಗಳಾಗಿವೆ. ಕೊಳಚೆ ನೀರನ್ನು ತೆಗೆದು ಸ್ವಚ್ಛ ಮಾಡುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ಚರಂಡಿಗಳಿಂದ ಸೊಳ್ಳೆಗಳ ಉತ್ಪತ್ತಿ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಡೆಂಗಿ, ಮಲೇರಿಯ ಸೇರಿದಂತೆ ಹಲವು ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡುವುದನ್ನು ಪುರಸಭೆ ಅಧಿಕಾರಿಗಳು ಮರೆತುಬಿಟ್ಟಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇದೀಗ ಸಾರ್ವಜನಿಕರು ಅನುಭವಿಸುವಂತಾಗಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


