ಶಿರಾ: ತಾಲ್ಲೂಕಿನ ಹುಯಿಲ್ ದೊರೆ ಬಳಿ ಭಾನುವಾರ ಎರಡು ಲಾರಿಗಳ ನಡುವೆ ಸಂಭವಿಸಿದೆ. ಅಪಘಾತದ ವೇಳೆ ಗೋದಿ ತುಂಬಿದ್ದ ಲಾರಿ ಪಲ್ಟಿಯಾಗಿ ರಸ್ತೆಯ ತುಂಬೆಲ್ಲಾ ಚೆಲ್ಲಾಡಿದ್ದ ಗೋದಿಯನ್ನು ತುಂಬಿಕೊಳ್ಳಲು ಜನರು ಮುಗಿಬಿದ್ದರು.
ಶಿರಾದಿಂದ ಹುಳಿಯಾರು ಕಡೆ ಗೋದಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹುಳಿಯಾರು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಗಾಯಗೊಂಡಿದ್ದಾರೆ.
ರಸ್ತೆಯಲ್ಲಿ ಚೆಲ್ಲಾಡಿದ ಗೋದಿ ತುಂಬಿಕೊಳ್ಳಲು ಮುಗಿಬಿದ್ದ ಜನರು ಪೊರಕೆ ಹಿಡಿದು ಗೋದಿಯನ್ನು ಒಟ್ಟುಗೂಡಿಸಿಕೊಂಡು ಚೀಲದಲ್ಲಿ ತುಂಬಿಕೊಂಡು ಮನೆಗಳಿಗೆ ಕೊಂಡೊಯ್ದರು. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


