ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ ಎರಡು ದಿನಗಳ ಕಾಲ ಆಯೋಜಿಸಲಾಗಿದೆ.
ವಿಜ್ಞಾನವು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಧುನಿಕ ಸೌಲಭ್ಯಗಳು, ವೈದ್ಯಕೀಯ ಪ್ರಗತಿ, ಗ್ರಂಥ ಜ್ಞಾನದ ಆವಿಷ್ಕಾರಗಳು ಮತ್ತು ಕೃಷಿ ಬೆಳವಣಿಗೆಯ ಮೂಲಕ ನಮ್ಮ ಜೀವನವನ್ನು ಸುಲಭ ಮತ್ತು ಅನುಕೂಲಕರವಾಗಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಬಾಹ್ಯಾಕಾಶ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯಂತಹ ಹಲವು ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದೆ.
ಶಾಲೆಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಕುತೂಹಲವನ್ನು ಹುಟ್ಟುಹಾಕುವ ಮೂಲಕ ಕಲಿಕೆಯನ್ನು ಉತ್ತೇಜಿಸುವ ಮತ್ತು ವೈಜ್ಞಾನಿಕ ಚಿಂತನೆಯನ್ನು ಬೆಳೆಸುವ ಪ್ರಮುಖ ಕಾರ್ಯನಿರ್ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸ ಹೊಸ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನಕ್ಕೆ ಇಟ್ಟಿದ್ದಾರೆ.
ಈ ಕಾರ್ಯಕ್ರಮವನ್ನು ಹನುಮಂತಪ್ಪ ಎಂ., ಕೆ.ಇ.ಎಸ್., ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ತಾಲ್ಲೂಕು, ಇವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ. ರಾಮಸ್ವಾಮಿ, ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರು, ತುಮಕೂರು ಮತ್ತು ನವೀನ್ ಕುಮಾರ್ ಕೆ., ವಿಜ್ಞಾನಿಗಳು ಡಿ.ಆರ್.ಡಿ.ಓ. ಬೆಂಗಳೂರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಪೋಷಕರು ಆಗಮಿಸಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


