nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    ತಿಪಟೂರು November 21, 2025

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    By adminNovember 21, 2025No Comments2 Mins Read
    kalpothsava

    ತಿಪಟೂರು: ಕಲ್ಪೋತ್ಸವದ ಎರಡನೇ ದಿನವಾದ ಗುರುವಾರದ ಜನಪದ ಸಂಭ್ರಮದಲ್ಲಿ ನಗರದ ಕೆಂಪಮ್ಮ ದೇವಸ್ಥಾನದಿಂದ ಕಲ್ಪತರು ಕ್ರೀಡಾಂಗಣದವರೆಗೆ ಅಂಬಾರಿ ಉತ್ಸವ ನಡೆಯಿತು.

    ತಾಲ್ಲೂಕು ಆಡಳಿತ, ಕಲಾಕೃತಿ ಸಂಘಟನೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡಪರ ಸಂಘಟನೆಗಳು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಾನಪದ ಸಂಭ್ರಮಕ್ಕೆ ಶಾಸಕ ಕೆ.ಷಡಕ್ಷರಿ ಚಾಲನೆ ನೀಡಿದರು.

    ನೊಣವಿನಕೆರೆ ಕಾಡಸಿದ್ದೇಶ್ವರ ಮಠದ 22 ವರ್ಷದ ಆನೆ ಲಕ್ಷ್ಮಿ ಎಂಬ ಹೆಣ್ಣು ಆನೆ ಮೇಲೆ ಅಂಬಾರಿಯನ್ನಿಟ್ಟು ಕನ್ನಡಾಂಬೆಯ ಭಾವ ಚಿತ್ರದೊಂದಿಗೆ ಉತ್ಸವ ಜರುಗಿತು.

    ಉತ್ಸವದಲ್ಲಿ ಬೆಳ್ಳಿರಥದಲ್ಲಿ ಹೊಸಳ್ಳಿ ಪುರದ ಬಸವೇಶ್ವರ ವಿಗ್ರಹ, ಕುದುರೆ, ಎತ್ತು ಹಸು ನಗಾರಿ, ನಂದಿಧ್ವಜ ಕುಣಿತ, ವೀರಗಾಸೆ, ಸೋಮನ ಕುಣಿತ, ನಾನಾ ಜನಪದ ಕಲಾ ತಂಡಗಳ ಮೆರವಣಿಗೆ, ಕನ್ನಡದ ಕೆಂಪು ಹಳದಿ ಬಾವುಟಗಳು ರಾರಾಜಿಸಿತು.

    ವಿವಿಧ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಜೊತೆಗೂಡಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಮಹಿಳೆಯರು ಪುರುಷರು ತಲೆಗೆ ಪೇಟ ಧರಿಸಿ ಸಂಭ್ರಮಿಸಿದರು.

    ಕ್ರೀಡಾಂಗಣದಲ್ಲಿ ಸಾಕು ಪ್ರಾಣಿಗಳ ಪ್ರದರ್ಶನ, ಮನರಂಜನಾ ಕ್ರೀಡಾಕೂಟಗಳು ನಡೆದವು. ರಂಗಗೀತೆಗಳ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಹಿರಿಯರ ವಿಭಾಗದಲ್ಲಿ ತರುಣ್ ಪ್ರಥಮ, ಸರಸ್ವತಿ ದ್ವಿತೀಯ, ಸಿಯಾ ಎಂ. ಪಟೇಲ ತೃತಿಯ, ಕಿರಿಯರ ವಿಭಾಗದಲ್ಲಿ ತನ್ಮಯಿ ಚೈತನ್ಯ ಪ್ರಥಮ, ಚಿನ್ಮಯ್‌ ಗೌಡ ದ್ವಿತೀಯ, ಚಿಂತನ ಎನ್‌.ಆರ್. ತೃತೀಯ ಸ್ಥಾನ ಪಡೆದರು.  ಮಕ್ಕಳ ಸಾಹಿತ್ಯ ಸಮ್ಮೇಳನ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.

    ಸಮ್ಮೇಳನಾಧ್ಯಕ್ಷೆ ಸೆಂಟ್ರಲ್ ಶಾಲೆಯ ಕಾವೇರಿ ಮಾತನಾಡಿ, ಮಕ್ಕಳ ಸಾಹಿತ್ಯ ಕೇವಲ ಕಥೆ, ಕವನ, ಕವಿತೆಗಳಿಗೆ ಸೀಮಿತವಾಗದೆ ಅವರ ಕನಸು, ಆತ್ಮವಿಶ್ವಾಸ ಚಿಂತನೆಗಳನ್ನು ಕಟ್ಟುವ ಪೀಠಿಕೆ ಆಗಬೇಕು. ಭಾಷೆ, ನಾಡು, ಸಂಸ್ಕೃತಿ ಬಗ್ಗೆ ಪ್ರೀತಿ ಗೌರವ ಬೆಳೆಸುವುದು ಮಕ್ಕಳ ಸಾಹಿತ್ಯ ಸಮ್ಮೇಳನದ ವಿಶೇಷತೆಯನ್ನು ಅರಿಯಬೇಕಿದೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಂಚಾಘಟ್ಟದ ರುದ್ರಮುನಿ ಸ್ವಾಮೀಜಿ, ಶಾಸಕ ಕೆ.ಷಡಕ್ಷರಿ, ಉಪವಿಭಾಗಧಿಕಾರಿ ಸಪ್ತಶ್ರೀ ಬಿ.ಕೆ., ಕಲಾಕೃತಿ ಸಂಸ್ಥೆ ಅಧ್ಯಕ್ಷ ಶ್ರೀಧರ್, ತಹಶೀಲ್ದಾರ್ ಮೋಹನ್‌ ಕುಮಾರ್, ತಾ.ಪಂ. ಇಒ ಸುದರ್ಶನ್, ಕಸಾಪ ತಾಲ್ಲೂಕು ಅಧ್ಯಕ್ಷ ಬಸವರಾಜಪ್ಪ, ಡಿವೈಎಸ್‌ ಪಿ ಜಯಲಕ್ಷಮ್ಮ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.