ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಸುಂಡ ಗ್ರಾಮದಲ್ಲಿ ಶುಕ್ರವಾರದಂದು ಹಾರ್ಟ್ ಸಂಸ್ಥೆ ಮೈಸೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ , ಪ್ರಾಥಮಿಕ ಆರೋಗ್ಯ ಕೇಂದ್ರ ಸಾಗರೆ, ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
8ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ, ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಹೃದಯ ಸಂಬಂಧಿತ ತೊಂದರೆಗಳು, 40 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮುಟ್ಟಿನ ಕಾಯಿಲೆ ಬಗ್ಗೆ ತಪಾಸಣೆ ಮಾಡಿ. ಪಾಪ್ ಸ್ಮಿಯರ್ ಮಾಡಲಾಗುತ್ತದೆ ಮತ್ತು ಉಸಿರಾಟದಲ್ಲಿ ತೊಂದರೆ ಬಗ್ಗೆ ತಪಾಸಣೆ ಮಾಡಲಾಗುತ್ತದೆ ಇಸಿಜಿ ತಪಾಸಣೆ ಮಾಡಲಾಗುತ್ತದೆ, ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು ಯಶಸ್ವಿಗೊಳಿಸಿ ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಶರತ್ ಹೆಚ್.ಎಸ್. ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕ್ಯಾನರ್ ಆರೋಗ್ಯ ಶಿಬಿರಗಳನ್ನು ಆಯೋಜಿಸುವಂತೆ ಹಾರ್ಟ್ ಸಂಸ್ಥೆ ಯವರಿಗೆ ಮನವಿ ಮಾಡಿದರು.
ಈ ಶಿಬಿರದಲ್ಲಿ ಬಿಪಿ ಶುಗರ್ 35, ಸಾಮಾನ್ಯ ರೋಗ ತಪಾಸಣೆ 20 ಜನ ಕಣ್ಣಿನ ಪರೀಕ್ಷೆ, ಪಿ ಎಫ್ ಟಿ ಪರೀಕ್ಷೆ 10, ಇಸಿಜಿ 25 ಜನರು ಈ ಶಿಬಿರದಲ್ಲಿ ಪ್ರಯೋಜನವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ಮೈಸೂರು ಎನ್ ಎಚ್ ಆಸ್ಪತ್ರೆ ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆರಾದ ಡಾ.ಪೂರ್ಣಿಮಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ನರಸಿಂಹ ಮೂರ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ.ಶರತ್ ಹೆಚ್.ಎಸ್., ಹಾರ್ಟ್ ಸಂಸ್ಥೆಯ ಶಿವಲಿಂಗು, ಆರೋಗ್ಯ ಇಲಾಖೆ ಸಿಬ್ಬಂದಿ ರವಿರಾಜ್, ಶರಣಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ಪುಷ್ಪ, ಮಾಚಿ, ನೇತ್ರಾ, ರಾಜೇಶ್, ಶಾಲೆ ಶಿಕ್ಷಕರಾದ ಕುಮಾರ್, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


