nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ

    November 22, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    • ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
    • ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
    • ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
    • ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    • ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    • ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
    • ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    ರಾಜ್ಯ ಸುದ್ದಿ November 22, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    By adminNovember 22, 2025No Comments4 Mins Read
    siddaramaiah modi

    ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಿಎಂ ಸಿದ್ದರಾಮಯ್ಯನವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ,  ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ.


    Provided by
    Provided by

    ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆ ಜೋಳ ಹಾಗೂ ಹೆಸರುಕಾಳನ್ನು 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಮೆಕ್ಕೆ ಜೋಳ ಮತ್ತು ಹೆಸರುಕಾಳು 1.983 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಉತ್ಪಾದನೆಯಾಗುವ ನಿರೀಕ್ಷೆಯಿದೆ. ಇದು ಸಮೃದ್ಧಿಯ ಅವಕಾಶವಾಗಬೇಕಿತ್ತು, ಆದರೆ ಪ್ರಸ್ತುತ ಮಾರುಕಟ್ಟೆ ಸ್ಥಿತಿಯು ಇದನ್ನು ಸಂಕಷ್ಟವನ್ನಾಗಿ ಪರಿವರ್ತಿಸಿದೆ.

    ಕೇಂದ್ರ ಸರ್ಕಾರವು ಮೆಕ್ಕೆ ಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2,400 ಹಾಗೂ ಹೆಸರುಕಾಳಿಗೆ ₹8,768 ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ಜೋಳಕ್ಕೆ ₹1600-1800 ಮತ್ತು ಹೆಸರುಕಾಳಿಗೆ ₹5,400 ಆಸುಪಾಸಿನಲ್ಲಿರುವುದು ತೀವ್ರ ಮತ್ತು ಹಿಂದೆಂದೂ ಕಾಣದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಹಿಂದಿನ ಮೂರು ವರ್ಷಗಳ ಮಾದರಿ ಬೆಲೆಗಳು ಎಂಎಸ್‌ಪಿ ಗಿಂತ ಹೆಚ್ಚಿರುವಾಗ, ಈ ವರ್ಷ ಬಾಹ್ಯ ಒತ್ತಡಗಳ ಪರಿಣಾಮ ಮತ್ತು ಸರಬರಾಜು-ಬೇಡಿಕೆಗಳ ಅಸಮತೋಲನದಿಂದ ಬೆಲೆಗಳು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದಿವೆ.

    ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಸ್ಥಳೀಯ ಕೈಗಾರಿಕೆಗಳ ಬಳಕೆಯ ಸಾಮರ್ಥ್ಯಕ್ಕಿಂತ ಇದು ಹೆಚ್ಚಾಗಿದೆ. ಆದ್ದರಿಂದ ಭಾರತ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ, ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ:

    1. NAFED, FCI ಮತ್ತು NCCF ಗೆ ತಕ್ಷಣ ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು ನಿರ್ದೇಶನ ನೀಡಬೇಕು

    ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು.

    1. ಎಥೆನಾಲ್ ಪೂರೈಕೆಯ ಇಡಿ ವ್ಯವಸ್ಥೆಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿ

    ಮೆಕ್ಕೆ ಜೋಳದಿಂದ ಉತ್ಪಾದಿತ ಎಥೆನಾಲ್‌ಗೆ ಮೂಲ ದರ ಲೀಟರ್‌ಗೆ ₹66.07 ಇದ್ದು, ಮೆಕ್ಕೆ ಜೋಳದಿಂದ ಪಡೆದ ಎಥೆನಾಲ್‌ಗೆ ಲೀಟರ್‌ಗೆ ₹5.79 (GST ಹೊರತುಪಡಿಸಿ) ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ.

    ಆದರೆ ಕರ್ನಾಟಕದ ಅನೇಕ ಎಥೆನಾಲ್ ಘಟಕಗಳು ರೈತರನ್ನು ಬಿಟ್ಟು ಮಧ್ಯವರ್ತಿಗಳಿಂದ ಮತ್ತು ವ್ಯಾಪಾರಿಗಳಿಂದ ಮೆಕ್ಕೆ ಜೋಳ ಖರೀದಿಸುತ್ತಿವೆ. ಇದು ಎಂಎಸ್‌ಪಿ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಉದ್ದೇಶವನ್ನೇ ವಿಫಲಗೊಳಿಸುತ್ತದೆ.

    ಎಥೆನಾಲ್ ಘಟಕಗಳು ರೈತರಿಂದ ಅಥವಾ ರೈತ ಉತ್ಪಾದಕ ಸಂಘಗಳಿಂದ (FPO) ನೇರವಾಗಿ ಮೆಕ್ಕೆ ಜೋಳ ಖರೀದಿಸುವಂತೆ ಕೇಂದ್ರ ಸರ್ಕಾರವು ಆದೇಶಿಸಬೇಕು. ನೇರ ಖರೀದಿ ಖಾತ್ರಿಗೊಳ್ಳದಿದ್ದಲ್ಲಿ, ರೈತರಿಗೆ ಪ್ರೋತ್ಸಾಹಧನ ತಲುಪದಿದ್ದ ಪಕ್ಷದಲ್ಲಿ ಎಥೆನಾಲ್ ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಮರುಪರಿಶೀಲಿಸಬೇಕು.

    1. ಕರ್ನಾಟಕಕ್ಕೆ ಎಥೆನಾಲ್‌ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಿ

    ಕರ್ನಾಟಕದಲ್ಲಿ ಮೆಕ್ಕೆ ಜೋಳದ ಉತ್ಪಾದನೆ ಗರಿಷ್ಠ ಪ್ರಮಾಣದಲ್ಲಿದ್ದು, ಸುಮಾರು 272 ಕೋಟಿ ಲೀ. ಡಿಸ್ಟಿಲರಿ ಸಾಮರ್ಥ್ಯ ಹೊಂದಿದೆ. ಹಾಗಾಗಿ ಎಥೆನಾಲ್‌ ಉತ್ಪಾದನೆಗೆ ಅಧಿಕ ಪ್ರಮಾಣದ ಮೆಕ್ಕೆ ಜೋಳದ ಉತ್ಪಾದನೆಯು ತಕ್ಕುದಾಗಿದೆ.

    2025-26ರ ಎಥೆನಾಲ್‌ ಟೆಂಡರ್‌ ಹಂಚಿಕೆಯ ಪ್ರಕಾರ ತೈಲ ಉತ್ಪಾದಕಾ ಕಂಪನಿಗಳು 1,050 ಕೋಟಿ ಲೀಟರ್‌ ಎಥೆನಾಲ್‌ ಉತ್ಪಾದಿಸಲು ಟೆಂಡರ್‌ ನೀಡಿವೆ. ಈ ಪೈಕಿ 758.6 ಕೋಟಿ ಲೀ. (72.45%) ಧಾನ್ಯಗಳ ಆಧಾರಿತ ಎಥೆನಾಲ್‌ ಉತ್ಪಾದನೆಗೆ ಹಂಚಿಕೆಯಾಗಿದ್ದು, ಇದರಲ್ಲಿ ಮೆಕ್ಕೆಜೋಳ ಒಂದರಿಂದಲೇ 478 ಕೋಟಿ ಲೀ. ಎಥೆನಾಲ್‌ ಉತ್ಪಾದಿಸಬೇಕಿದೆ. ಕರ್ನಾಟಕದಲ್ಲಿರುವ 49 ಘಟಕಗಳಿಂದ 272 ಕೋಟಿ ಲೀ. ಎಥೆನಾಲ್‌ ಉತ್ಪಾದಿಸುವ ಸಾಮರ್ಥ್ಯವಿದ್ದರೂ ನಮ್ಮ ರಾಜ್ಯಕ್ಕೆ ಅತ್ಯಂತ ಕಡಿಮೆ ಹಂಚಿಕೆ ಮಾಡಲಾಗಿದೆ. ರಾಜ್ಯದ ಮೆಕ್ಕೆಜೋಳದ ಉತ್ಪಾದನಾ ಸಾಮರ್ಥ್ಯ ಹೆಚ್ಚಿದ್ದು, ನಮ್ಮ ಎಥೆನಾಲ್‌ ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

    ಧಾನ್ಯ ಆಧಾರಿತ ಎಥೆನಾಲ್‌ ಉತ್ಪಾದನೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪ್ರಮುಖವಾಗಿರುವುದರಿಂದ ಹಂಚಿಕೆಯ ವ್ಯತ್ಯಾಸವು ಅತ್ಯಂತ ಕಳವಳಕಾರಿಯಾಗಿದೆ. ಪ್ರಸಕ್ತ ವರ್ಷದ ವಲಯವಾರು ಹಂಚಿಕೆ ವ್ಯವಸ್ಥೆಯು ಕರ್ನಾಟಕದಂತಹ ಗರಿಷ್ಠ ಉತ್ಪದನಾ ಸಾಮರ್ಥ್ಯದ ರಾಜ್ಯಕ್ಕೆ ಅನನುಕೂಲವಾಗಿದೆ. ನಮ್ಮ ಉತ್ಪಾದನಾ ಸಾಮರ್ಥ್ಯಕ್ಕೆ ತಕ್ಕಂತೆ ಹೆಚ್ಚಿನ ಪ್ರಮಾಣದ ಧಾನ್ಯ ಆಧಾರಿತ ಎಥೆನಾಲ್‌ ಉತ್ಪಾದನೆಯ ಹಂಚಿಕೆಯನ್ನು ಪಡೆಯಲು ಕರ್ನಾಟಕವು ಯೋಗ್ಯವಾಗಿದೆ. ಇದರಿಂದ ಬೇಡಿಕೆಯ ಎಂಎಸ್‌ಪಿ ಬೆಲೆಯನ್ನು ಸರಿದೂಗಿಸಲು ಮತ್ತು ತೆರೆದ ಮಾರುಕಟ್ಟೆಗಳಲ್ಲಿ ರೈತರ ಹಿತಾಸಕ್ತಿಯನ್ನು ಕಾಪಾಡಲು ಸಾಧ್ಯವಾಗುತ್ತದೆ.

    1. ಮೆಕ್ಕೆಜೋಳ ಆಮದು ಕಡಿಮೆ ಮಾಡಿ

     

    ಕಳೆದ ವರ್ಷ ಮಯನ್ಮಾರ್, ಉಕ್ರೇನ್‌ ಮತ್ತಿತರ ರಾಷ್ಟ್ರಗಳಿಂದ ಹೆಚ್ಚಾಗಿ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದ್ದರಿಂದ ದೇಶದ ರೈತರಿಗೆ ದೊಡ್ಡ ಹೊಡೆತ ಬಿದ್ದಿದೆ. ಇಂತಹ ಆಮದು ಪ್ರಕ್ರಿಯೆಯಿಂದ ದೇಶಿಯವಾಗಿ ಬೆಲೆ ಕುಸಿಯಲು ಕಾರಣವಾಗಿದೆ ಮತ್ತು ರೈತರ ನ್ಯಾಯಯುತ ಆದಾಯಕ್ಕೆ ಬರೆ ಎಳೆದಂತಾಗಿದೆ. ಹಾಗಾಗಿ ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ನಾನು ಕೇಂದ್ರ ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತಿದ್ದೇನೆ. ಇದರಿಂದ ವಿಶ್ವದಲ್ಲೇ ಅತ್ಯುತ್ತಮ ಮೆಕ್ಕೆಜೋಳ ಉತ್ಪಾದಿಸುವ ಭಾರತದ ರೈತರಿಗೆ ನ್ಯಾಯ ಒದಗಿಸಿದಂತಾಗುತ್ತದೆ.

    1. ಹೆಸರುಕಾಳು ಖರೀದಿಗೆ ಗುಣಮಟ್ಟದ ನಿಯಮಗಳಲ್ಲಿ ಸಡಿಲಿಕೆ

    ಅನಿರೀಕ್ಷಿತ ಮಳೆಯಿಂದಾಗಿ ಕರ್ನಾಟಕದ ಹೆಸರುಕಾಳು ಬೆಳೆಯು ಕೆಲವು ಭಾಗದಲ್ಲಿ 6-10% ವರೆಗೆ ಬಣ್ಣ ಮಾಸಿದೆ. ಕೇಂದ್ರ ಸರ್ಕಾರದ FAQ ಗಳು MSP ಅಡಿ ಗರಿಷ್ಠ 4% ಬಣ್ಣ ಮಾಸಿದ್ದರೂ ಖರೀದಿಗೆ ಅವಕಾಶ ನೀಡಿದೆ, ನಮ್ಮ ಬೆಳೆ ಸ್ವಲ್ಪ ಹೆಚ್ಚು ಬಣ್ಣ ಮಾಸಿದ್ದರೂ ಆಹಾರ ಉದ್ದೇಶದ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಿಗೆ ನಿರ್ದೇಶನ ನೀಡಿ 10% ವರೆಗೆ ಬಣ್ಣ ಮಾಸಿರುವ ಹೆಸರುಕಾಳನ್ನು MSP ದರದಲ್ಲಿ ಖರೀದಿಸಲು ಅವಕಾಶ ನೀಡಬೇಕು. ಇದರಿಂದ ರೈತರು ತಮ್ಮ ನಿಯಂತ್ರಣದಲ್ಲಿ ಇಲ್ಲದ ಹವಾಮಾನ ವೈಪರಿತ್ಯಗಳು ಉಂಟುಮಾಡುವ ನಷ್ಟವನ್ನು ತಪ್ಪಿಸಿಕೊಳ್ಳಬಹುದಾಗಿದೆ.

    ಕರ್ನಾಟಕದ ಪ್ರತಿಯೊಂದು ರೈತ ಕುಟುಂಬವು ಎಂಎಸ್‌ಪಿಯನ್ನು ಗೌರವಯುತ ಹಾಗೂ ನ್ಯಾಯಯುತ ಆದಾಯ ಎಂದು ಪರಿಗಣಿಸಿದೆ. ಇಂದು ಬೆಲೆಯು ಎಂಎಸ್‌ಪಿಗಿಂತ ಕೆಳಗೆ ಬಿದ್ದಾಗ ಮತ್ತು ಮಾರುಕಟ್ಟೆಗಳು ಅವರ ವಿರುದ್ಧ ನಿಂತಾಗ ತಕ್ಷಣ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು. ದೇಶದ ಆಹಾರ ಭದ್ರತೆಗೆ, ಎಥೆನಾಲ್‌ ಉತ್ಪಾದನೆಯ ಸಾಮರ್ಥ್ಯ ವಿಸ್ತರಿಸಲು ಮತ್ತು ಆರ್ಥಿಕ ಬೆಳವಣಿಗೆಗೆ ಕರ್ನಾಟಕದ ರೈತರು ಗರಿಷ್ಠ ಪ್ರಮಾಣದ ಕೊಡುಗೆಯನ್ನು ನೀಡುತ್ತಿದ್ದಾರೆ. ನ್ಯಾಯಯುತ ಬೆಲೆ ಮತ್ತು ಸಮಾನ ಎಥೆನಾಲ್‌ ಹಂಚಿಕೆಯು ರೈತರ ಹಕ್ಕು ಮಾತ್ರವಲ್ಲ, ಅದು ರಾಷ್ಟ್ರೀಯ ಜವಾಬ್ದಾರಿಯು ಹೌದು. ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ತಕ್ಷಣ ಧಾವಿಸಬೇಕು ಮತ್ತು ನಮ್ಮ ರಾಷ್ಟ್ರದ ಬೆನ್ನೆಲುಬು ಆಗಿರುವ ಕೃಷಿ ಕ್ಷೇತ್ರವನ್ನು ಶಕ್ತಿಯುತವಾಗಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಕೊರಟಗೆರೆ : ರಾಜ್ಯದಲ್ಲಿ ಮತ್ತು ಸ್ಥಳೀಯವಾದ ಸಮಸ್ಯೆಗಳು ಬಗ್ಗೆ ಹಾಗೂ ಸಮಾಜದಲ್ಲಿ ಏನಾಗುತ್ತಿದೆ ಎಂದು ಪತ್ರಕರ್ತರ ಸುದ್ದಿಯಿಂದ ತಿಳಿದುಕೊಳ್ಳುವ ಸರ್ಕಾರ…

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ

    November 22, 2025

    ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು

    November 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.