ಪಾವಗಡ: ಮೊಬೈಲ್ ಹವ್ಯಾಸದಿಂದ ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಎಚ್. ನಾಗರಾಜ ಅಭಿಪ್ರಾಯಪಟ್ಟರು.
ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ಅವರು ಮಾತನಾಡಿದರು.
ಗ್ರಂಥಾಲಯಗಳು ಓದುಗರ ಕೈಗೆಟುವಂತಿರಬೇಕು. ಮೊಬೈಲ್ ಬಳಕೆ ಮಿತಿ ಮೀರಿದ್ದು. ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇತ್ತೀಚಿನ ದಿನಗಳಲ್ಲಿ ದಿನಪತ್ರಿಕೆ, ಪ್ರಮುಖ ಪುಸ್ತಕಗಳನ್ನು ಮೊಬೈಲ್‌ನಲ್ಲಿಯೇ ಓದುವ ಹವ್ಯಾಸ ಹೆಚ್ಚುತ್ತಿದೆ ಎಂದು ತಿಳಿಸಿದರು.
ಗ್ರಂಥಾಲಯ ಸಹಾಯಕ ಟಿ.ಕೆ. ಬಸವರಾಜ್ ಮಾತನಾಡಿ, ಓದುವ ಹವ್ಯಾಸವುಳ್ಳವರಿಗೆ ಸ್ನೇಹಿತರ ಅಗತ್ಯವಿರುವುದಿಲ್ಲ. ಗ್ರಂಥಾಲಯದಲ್ಲಿ ಎಲ್ಲರಿಗೂ ಎಲ್ಲಾ ತರಹದ ಪುಸ್ತಕಗಳಿರುತ್ತವೆ. ವಿವಿಧ ದಿನಪತ್ರಿಕೆಗಳಿರುತ್ತವೆ. ವಿದ್ಯಾರ್ಥಿಗಳು ಸಾರ್ವಜನಿಕ ಓದುಗರು ಅವುಗಳನ್ನು ಓದಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪ್ರವೀಣ್ ಕುಮಾರ್, ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಗ್ರಂಥಾಲಯದಲ್ಲಿ ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನನ ಸಂಪಾದಿಸಿ ಎಂದರು.
ಸಪ್ತಾಹದ ಅಂಗವಾಗಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ, ರಸಪ್ರಶ್ನೆ, ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಉತ್ತಮ ಓದುಗ ಪ್ರಶಸ್ತಿ ಪಡೆದ ಟಿ. ಶಶಿಕುಮಾರ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ತಿಪ್ಪೇಸ್ವಾಮಿ ದುರ್ಗಾವರ, ಪಳವಳ್ಳಿ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


