ಔರಾದ: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಔರಾದ್ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜನಾಬಾಯಿ ದಿಗಂಬರ ಭಾಷಣ ಸ್ಪರ್ಧೆಯಲ್ಲಿ ಹಾಗೂ ಲಕ್ಷ್ಮೀ ಅನೀಲ್ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಚಂದ್ರಕಾಂತ್ ಶಾಹಾಬಾದಕರ್, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿದರು. ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ, ಉಪನ್ಯಾಸಕರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


