ಪಾವಗಡ: ನಿರುದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕುವೆಂಪು ನಗರದ ಕೆಇಬಿ ಕಚೇರಿ ಪಕ್ಕದಲ್ಲಿ ಸೋಮವಾರ ಬೆಳಗ್ಗೆ ವರದಿಯಾಗಿದೆ.
27 ವರ್ಷದ ಚಂದನ್ ಕುಮಾರ್ ಮೃತ ವ್ತಕ್ತಿ ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ತುಮಕೂರಿನಲ್ಲಿ ಇವರು ಕುಟುಂಬ ಸಮೇತ ವಾಸವಿದ್ದು ಇತ್ತೀಚಿಗಷ್ಟೇ ಇವರ ಚಿಕ್ಕಮ್ಮನ ಮನೆಗೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರಿಯಾದ ಉದ್ಯೋಗವಿಲ್ಲದೆ ಅವಮಾನಕ್ಕೀಡಾಗಿದ್ದೆನೆಂದು ಮನನೊಂದ ಚಂದನ್ ಮಧ್ಯರಾತ್ರಿ ರಸ್ತೆ ಪಕ್ಕದಲ್ಲಿರುವ ಹುಣಿಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಮಗಳನ್ನು ಕೈಗೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


